ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ಣ ತರಗತಿ: ಸರ್ಕಾರದಿಂದ ಅಧಿಕೃತ ಆದೇಶ

Last Updated 30 ಜನವರಿ 2021, 19:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಫೆ.1ರಿಂದ ಪೂರ್ಣ ತರಗತಿ ನಡೆಸುವುದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಶನಿವಾರ ಅಧಿಕೃತ ಸುತ್ತೋಲೆ ಹೊರಡಿಸಿದೆ.

9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ, ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ನಡೆಸಬೇಕು. ಹಾಜರಾತಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ. ವಿದ್ಯಾರ್ಥಿಗಳು ಮನೆಯಿಂದಲೇ ಮಧ್ಯಾಹ್ನದ ಊಟ ತರಬೇಕು. 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಹಾಲಿ ವಿದ್ಯಾಗಮ ಕಲಿಕೆ ಕಾರ್ಯಕ್ರಮ ಮುಂದುವರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕೋವಿಡ್ ಮಾರ್ಗಸೂಚಿ ಕ್ರಮಗಳ ಮೇಲ್ವಿಚಾರಣೆಗೆ ಪ್ರತಿ ಕಾಲೇಜಿನಲ್ಲೂ ಒಬ್ಬ ಉಪನ್ಯಾಸಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಬೇಕು. ಆ ಅಧಿಕಾರಿ ನಿತ್ಯ ಜಿಲ್ಲಾ ಉಪನಿರ್ದೇಶಕರಿಗೆ ಕೋವಿಡ್ ಸಂಬಂಧಿತ ಪ್ರಕರಣಗಳ ವರದಿ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಜ. 1ರಿಂದ 10ಮತ್ತು 12ನೇ ತರಗತಿ ಮಕ್ಕಳಿಗೆ ಮಾತ್ರ ಶಾಲೆ, ಕಾಲೇಜುಗಳಲ್ಲಿ ಭೌತಿಕ ಹಾಜರಾತಿಗೆ ಅವಕಾಶ ನೀಡಿ ಕೆಲ ಗಂಟೆ ಕಾಲ ಮಾತ್ರ ತರಗತಿ ನಡೆಸಲಾಗುತ್ತಿತ್ತು. ಈಗ 9ರಿಂದ 12ನೇ ತರಗತಿವರೆಗಿನ ಮಕ್ಕಳಿಗೆ ಇಡೀ ದಿನ ತರಗತಿಗಳನ್ನು ನಡೆಸಲು ಇಲಾಖೆ ತೀರ್ಮಾನಿಸಿದ್ದು, ಎಲ್ಲ ಜಿಲ್ಲಾ ಡಿಡಿಪಿಐ, ಬಿಇಒಗಳು ತಮ್ಮ ವ್ಯಾಪ್ತಿಯ ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ತರಗತಿ ಬೋಧನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT