ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 9,136.89 ಕೋಟಿ ಕೃಷಿ ಸಾಲ– ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್

ರೈತರಿಗೆ ಸಾಲ: ಈವರೆಗೆ ಶೇ 72.96 ಸಾಧನೆ
Last Updated 24 ಅಕ್ಟೋಬರ್ 2021, 20:39 IST
ಅಕ್ಷರ ಗಾತ್ರ

ಬೆಂಗಳೂರು: 'ಪ್ರಸಕ್ತ ಸಾಲಿನಲ್ಲಿ ಈವರೆಗೆ 12,35,033 ರೈತರಿಗೆ ₹ 9,136,89 ಕೋಟಿ ಸಾಲ ನೀಡಲಾಗಿದ್ದು, ಶೇ 72.96 ಗುರಿ ಸಾಧಿಸಲಾಗಿದೆ’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದ್ದಾರೆ.

‘ಈ ಸಾಲಿನಲ್ಲಿ 30,85,644 ರೈತರಿಗೆ ₹ 2,0810 ಕೋಟಿ ಕೃಷಿ ಸಾಲ ನೀಡುವ ಗುರಿ ಹೊಂದಲಾಗಿದೆ. ಸಾಲ ನೀಡಿಕೆಯಲ್ಲಿ ಕಳೆದ ಬಾರಿ ಶೇ 115ರಷ್ಟು ಗುರಿ ಸಾಧಿಸಿದ್ದು, ಈ ಬಾರಿ ಶೇ 125ರಷ್ಟು ಸಾಧನೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ’ ಎಂದಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ ತಿಂಗಳಿನಲ್ಲಿಯೇ ಅಲ್ಪಾವಧಿ, ಮಧ್ಯಮಾವಧಿ, ದೀರ್ಘಾವಧಿ ಸಾಲ ವಿತರಣೆಯಲ್ಲಿ ಗಮನಾರ್ಹ ಸಾಧನೆ ಆಗಿದೆ. ಅಲ್ಪಾವಧಿ ಸಾಲ ನೀಡಿಕೆಯಲ್ಲಿ 30,25,788 ರೈತರಿಗೆ ₹ 19,370 ಕೋಟಿ ಸಾಲ ನೀಡುವ ಗುರಿ ಹೊಂದಿದ್ದು, ಈಗಾಗಲೇ 12,25,027 ರೈತರಿಗೆ ₹ 8,742.10 ಕೋಟಿ ಸಾಲ ವಿತರಿಸಿ ಶೇ 45.55 ಸಾಧನೆ ತೋರಲಾಗಿದೆ. ಮಧ್ಯಮಾವಧಿ/ದೀರ್ಘಾವಧಿ ಸಾಲ ನೀಡಿಕೆಯಲ್ಲಿ 59,856 ರೈತರಿಗೆ ₹ 1,440 ಕೋಟಿ ಸಾಲ ನೀಡಿಕೆ ಗುರಿ ಹಾಕಿಕೊಳ್ಳಲಾಗಿದೆ. ಅದರಲ್ಲಿ 10,009 ರೈತರಿಗೆ ₹ 394.79 ಕೋಟಿ (ಶೇ 27.41) ಸಾಲ ವಿತರಿಸಲಾಗಿದೆ. ಈ ಮೂರೂ ವಿಭಾಗದಲ್ಲಿ ಇದೇ 23 ರವರೆಗೆ ಶೇ 72.96 ಸಾಧನೆ ಆಗಿದೆ’ ಎಂದು ಅವರು ತಿಳಿಸಿದ್ದಾರೆ.

ಡಿಸಿಸಿ ಬ್ಯಾಂಕ್‌ಗಳ ಸಭೆ ಶೀಘ್ರ: ‘ಈ ಬಾರಿಶೇ 125 ಸಾಲ ನೀಡಿಕೆ ಗುರಿ ನಮ್ಮದು. ಈ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿವೆ. ನಾನು ಕೂಡಾ ಕಾಲ ಕಾಲಕ್ಕೆ ಡಿಸಿಸಿ ಬ್ಯಾಂಕ್‌ಗಳ ಪ್ರಗತಿ ಪರಿಶೀಲನೆ ಮಾಡುತ್ತಿದ್ದೇನೆ. ಸಮಸ್ಯೆಗಳನ್ನು ಆಲಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಕಾರ್ಯನಿರ್ವಹಿಸಲಿದ್ದೇನೆ. ಡಿಸಿಸಿ ಬ್ಯಾಂಕ್‌ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಶೀಘ್ರದಲ್ಲೇ ಕರೆಯುತ್ತೇನೆ. ಈ ಮೂಲಕ ಬ್ಯಾಂಕ್‌ಗಳು ತೋರಿರುವ ಸಾಧನೆ, ಎದುರಿಸುತ್ತಿರುವ ಸಣ್ಣಪುಟ್ಟ ತೊಡಕುಗಳು, ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ, ಪರಿಹಾರಗಳನ್ನು ಸೂಚಿಸಲಾಗುವುದು‘ ಎಂದಿದ್ದಾರೆ.

‘ರೈತರ ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿ ಇದ್ದರೂ 21 ಡಿಸಿಸಿ ಬ್ಯಾಂಕ್‌ಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಅರ್ಹ ಫಲಾನುಭವಿಗಳಿಗೆ ಸಾಲ ಕೊಡುವಂತೆ ಸೂಚಿಸಿದ್ದೇನೆ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT