ಮಂಗಳವಾರ, ಡಿಸೆಂಬರ್ 1, 2020
18 °C

ರಾಜ್ಯದಲ್ಲಿ 9,10ನೇ ತರಗತಿಗೆ ಶಾಲೆ ಆರಂಭ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಲೆಗಳಲ್ಲಿ ವಿದ್ಯಾರ್ಥಿಗಳು–ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 9 ಮತ್ತು 10ನೇ ತರಗತಿಗಳಿಗೆ ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ.

ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದ್ದು, ಶಾಲೆಗಳನ್ನು ಆರಂಭಿಸುವ ಕುರಿತು ಸರ್ಕಾರಕ್ಕೆ ಸಲ್ಲಿಸಲಿರುವ ವರದಿಯಲ್ಲಿ ಇಲಾಖೆಯ ಆಯುಕ್ತ ಅನ್ಬುಕುಮಾರ್‌ ಈ ವಿಷಯವನ್ನು ಪ್ರಸ್ತಾವಿಸುವ ಸಾಧ್ಯತೆ ಇದೆ.

9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು 14–15 ವಯೋಮಾನದವರಾಗಿದ್ದು, ಮಾಸ್ಕ್‌ ಧರಿಸುವುದು, ಅಂತರ ಕಾಪಾಡುವುದು, ಸಾನಿಟೈಸರ್‌ ಬಳಕೆಯ ಬಗ್ಗೆ ಅರಿವು ಮೂಡಿಸಬಹುದು. ಅಲ್ಲದೆ, ಪರ್ಯಾಯ ದಿನಗಳಲ್ಲಿ ಶಾಲೆ ನಡೆಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆ ಅಂಶಗಳನ್ನು ವರದಿಯಲ್ಲಿ ಅನ್ಬುಕುಮಾರ್‌ ಉಲ್ಲೇಖಿಸಲಿದ್ದಾರೆ.

ಶಿಕ್ಷಕರ ವರ್ಗಾವಣೆ 18ರಿಂದ

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿಗೆ ಸಂಬಂಧಿಸಿದ ಕಡತಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಅನುಮೋದನೆ ನೀಡಿದ್ದಾರೆ. ನ. 18ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ. 2–3 ದಿನಗಳಲ್ಲಿ ಈ ಕುರಿತು ಸುತ್ತೋಲೆ ಪ್ರಕಟವಾಗಲಿದೆ ಎಂದೂ ಇಲಾಖೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು