9 ರಿಂದ 12ನೇ ತರಗತಿ ಆರಂಭ: ಮಾರ್ಗಸೂಚಿ ಬಿಡುಗಡೆ

ನವದೆಹಲಿ: 9ನೇ ತರಗತಿಯಿಂದ 12ನೇ ತರಗತಿವರೆಗೆ ಇದೇ 21ರಿಂದ ಸ್ವಯಂ ಪ್ರೇರಿತವಾಗಿ ಭಾಗಶಃ ಶಾಲೆ ಆರಂಭಿಸುವ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ವಿದ್ಯಾರ್ಥಿಗಳು ನೋಟ್ ಪುಸ್ತಕ, ಪೆನ್–ಪೆನ್ಸಿಲ್, ನೀರಿನ ಬಾಟಲಿ ಮೊದಲಾದವುಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ ಎಂದು ಮಾರ್ಗಸೂಚಿ ಯಲ್ಲಿ ಹೇಳಲಾಗಿದೆ. ಗುಂಪುಗೂಡುವಿಕೆ, ಪ್ರಾರ್ಥನೆ ಮತ್ತು ಕ್ರೀಡಾ ಚಟುವಟಿಗಳನ್ನೂ ನಿಷೇಧಿಸಲಾಗಿದೆ.
ವಿದ್ಯಾರ್ಥಿಗಳ ಪೋಷಕರ ಲಿಖಿತ ಒಪ್ಪಿಗೆ ಪತ್ರ ಕೂಡ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದೆ. ವಿದ್ಯಾರ್ಥಿ ಮತ್ತು ಶಿಕ್ಷರ ನಡುವಿನ ಸಂವಾದ ವ್ಯವಸ್ಥಿತ ಕ್ರಮದಲ್ಲಿರಬೇಕು ಎಂದೂ ಸಚಿವಾಲಯ ಸೂಚಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.