ಬೆಂಗಳೂರು: ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಹೆಸರಿನಲ್ಲಿ 'ಫೇಸ್‌ಬುಕ್' ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿರುವ ಕಿಡಿಗೇಡಿಗಳು, ಹಣದ ಸಹಾಯ ಕೋರಿ ಸಚಿವರ ಸ್ನೇಹಿತರಿಗೆ ಸಂದೇಶ ಕಳುಹಿಸುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ನಿರಾಣಿ, ‘ನಕಲಿ ಖಾತೆ ಸೃಷ್ಟಿಸಿರುವ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡಲು ಚಿಂತನೆ ನಡೆಸಿದ್ದೇನೆ’ ಎಂದಿದ್ದಾರೆ.
‘ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ಕಿಡಿಗೇಡಿಗಳು ನಕಲಿ ಖಾತೆ ಸೃಷ್ಟಿಸಿದ್ದಾರೆ. ನನ್ನ ಹೆಸರಿನಲ್ಲೇ ಹಣ ಸಹಾಯ ಕೇಳಿದ ರೀತಿಯಲ್ಲಿ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ಇಂಥ ಸಂದೇಶಗಳನ್ನು ಯಾರೂ ನಂಬಬಾರದು. ಕಿಡಿಗೇಡಿಗಳ ವಂಚನೆ ಜಾಲಕ್ಕೆ ಸಿಲುಕಬಾರದು’ ಎಂದೂ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.