ಭಾನುವಾರ, ಅಕ್ಟೋಬರ್ 24, 2021
20 °C

ಆರ್‌ಎಸ್‌ಎಸ್‌ಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ರಾಜಕೀಯಕ್ಕೂ ಆರ್‌ಎಸ್‌ಎಸ್‌ಗೂ ಸಂಬಂಧವಿಲ್ಲ. ಅಧಿಕಾರ ವ್ಯವಸ್ಥೆಯಲ್ಲಿ ಆರ್‌ಎಸ್‌ಎಸ್‌ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಕುರಿತು ನೀಡಿದ ಹೇಳಿಕೆಗೆ ನಾರಾಯಣಸ್ವಾಮಿ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

‘ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಒಂದು ರೀತಿ ಹಾಗೂ ಅಧಿಕಾರ ಇಲ್ಲದಾಗ ಮತ್ತೊಂದು ರೀತಿ ಮಾತನಾಡುತ್ತಾರೆ. ಸಂಘದ ಸಿದ್ಧಾಂತವನ್ನು ಬಿಜೆಪಿ ನಾಯಕರೆಲ್ಲರೂ ಸ್ವೀಕರಿಸಿದ್ದೇವೆ. ಬಿಜೆಪಿ ಜೊತೆಗೆ ಅಧಿಕಾರ ಹಂಚಿಕೊಳ್ಳುವ ಸಂದರ್ಭದಲ್ಲಿ ನಾವು ಆರ್‌ಎಸ್‌ಎಸ್‌ ಎಂಬುದು ಗೊತ್ತಿರಲಿಲ್ಲವೇ’ ಎಂದು ಪ್ರಶ್ನಿಸಿದರು.

‘ಉತ್ತರಪ್ರದೇಶದ ಲಿಖಿಂಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಇದೇ ವಿಚಾರವಾಗಿ ಸಿದ್ದರಾಮಯ್ಯ ಅವರು ಆಡಿದ ಮಾತುಗಳು ಶೋಭೆ ತರುವುದಿಲ್ಲ. ಅವರ ಅಧಿಕಾರದ ಅವಧಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಬ್ದಾರಿಯುತ ಹುದ್ದೆ ನಿಭಾಯಿಸಿ ಹೀಗೆ ಮಾತನಾಡಬಾರದು’ ಎಂದರು.

‘ಐಟಿ ದಾಳಿಗೆ ರಾಜಕೀಯ ಬಣ್ಣ ಬೇಡ’

‘ನಿತ್ಯ ದೇಶದ ಹಲವೆಡೆ ಐಟಿ ದಾಳಿ ನಡೆಯುತ್ತವೆ. ಐಟಿ ದಾಳಿಗೆ ರಾಜಕೀಯ ಬಣ್ಣ ಬಳಿಯುವುದು ತಪ್ಪು ಎಂದು ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

‘ರಾಜ್ಯದ ಹಲವೆಡೆ ನಡೆದ ಐಟಿ ದಾಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ಉತ್ತರ ನೀಡಿದ್ದಾರೆ. ಐಟಿ ದಾಳಿಗೂ ಯಡಿಯೂರಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು