ಭಾನುವಾರ, ಮೇ 16, 2021
22 °C

ವೃತ್ತಿ ಶಿಕ್ಷಣ ಶಿಕ್ಷಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡಿರುವ ವೃತ್ತಿ ಶಿಕ್ಷಣ (ಜೆಒಸಿ) ಶಿಕ್ಷಕರ ಸಮಸ್ಯೆಗಳಿಗೆ ಇತಿಶ್ರೀ ಹಾಡಿ ಅನುಕೂಲ ಮಾಡಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ವಿಲೀನಗೊಂಡ ವೃತ್ತಿ ಶಿಕ್ಷಕರ ಬೇಡಿಕೆಗಳ ಕುರಿತು ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ವಿಲೀನಗೊಳಿಸದೇ ಬಾಕಿ ಉಳಿದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11 ಭಾಷಾ ಉಪನ್ಯಾಸಕರ ಮತ್ತು 28 ಬೋಧಕೇತರ ಸಿಬ್ಬಂದಿನ್ನು ವಿಲೀನಗೊಳಿಸುವ ಸಂಬಂಧದಲ್ಲಿ ಅನುಮೋದನೆಗಾಗಿ ಕಡತ ಮಂಡಿಸುವಂತೆ ಪಿಯು ನಿರ್ದೇಶಕರಿಗೆ ಸಚಿವರು ನಿರ್ದೇಶನ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆಗಳಲ್ಲಿ ವಿಲೀನಗೊಂಡ, ನಿವೃತ್ತಿ ಅಂಚಿನಲ್ಲಿರುವ 95 ಜೆಒಸಿ ಉಪನ್ಯಾಸಕರಿಗೆ ಒಂದು ಬಾರಿ ವಿಶೇಷ ಪ್ರಕರಣವಾಗಿ ಬಿ.ಇಡಿ ವಿನಾಯಿತಿ ನೀಡಿ, ಪ್ರೊಬೇಷನರಿ ಅವಧಿ ಘೋಷಿಸಲೂ ಕೂಡಾ ಕ್ರಮ ಕೈಗೊಳ್ಳಲು ಅಗತ್ಯ ಪ್ರಸ್ತಾವ ಸಲ್ಲಿಸಬೇಕು ಎಂದು ಸೂಚಿಸಿದರು.

ವಿಧಾನಪರಿಷತ್‌ ಸದಸ್ಯರಾದ ಅರುಣ ಶಹಾಪುರ, ಎಸ್.ವಿ. ಸಂಕನೂರು, ಶಶೀಲ್ ನಮೋಶಿ, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಹನುಮಂತ ನಿರಾಣಿ, ಅ. ದೇವೇಗೌಡ, ವೈ.ಎ. ನಾರಾಯಣಸ್ವಾಮಿ, ಪುಟ್ಟಣ್ಣ, ಮಾಧ್ಯಮಿಕ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಗಣೇಶ ಕಾರ್ಣಿಕ್, ಮಾಧ್ಯಮಿಕ ಶಿಕ್ಷಕರ ಸಂಘದ ಪ್ರದಾನ ಕಾರ್ಯದರ್ಶಿ ಹಾಗೂ ಜೆಒಸಿ ಶಿಕ್ಷಕರ ಸಂಘದ ಅಧ್ಯಕ್ಷ ಎ. ಗಂಗಾಧರ ಆಚಾರ್, ಪಿಯು ಇಲಾಖೆ ನಿರ್ದೇಶಕರಾದ ಸ್ನೇಹಲ್ ಸಭೆಯಲ್ಲಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು