ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗತ್ ಸಿಂಗ್ ನೇಣುಗಂಬಕ್ಕೇರುವ ಪಾತ್ರದ ಅಭ್ಯಾಸ ಮಾಡುತ್ತಿದ್ದಾಗ ವಿದ್ಯಾರ್ಥಿ ಸಾವು

Last Updated 30 ಅಕ್ಟೋಬರ್ 2022, 8:34 IST
ಅಕ್ಷರ ಗಾತ್ರ

ಚಿತ್ರದುರ್ಗ: ಭಗತ್ ಸಿಂಗ್ ನೇಣುಗಂಬಕ್ಕೆ ಏರುವ ಪಾತ್ರದ ಅಭ್ಯಾಸದ ವೇಳೆ ಆಕಸ್ಮಿಕವಾಗಿ ನೇಣು ಹಾಕಿಕೊಂಡು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಗರದ ಕೆಳಗೋಟೆಯಲ್ಲಿ ನಡೆದಿದೆ.

ನಾಗರಾಜ್ ಮತ್ತು ಭಾಗ್ಯಲಕ್ಷ್ಮಿ ದಂಪತಿಯ ಪುತ್ರ ಸಂಜಯ್ ಗೌಡ (12) ಮೃತ ವಿದ್ಯಾರ್ಥಿ. ನಗರದ ಎಸ್.ಎಲ್.ವಿ ಶಿಕ್ಷಣ ಸಂಸ್ಥೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ನವೆಂಬರ್‌ 1ರಂದು ರಾಜ್ಯೋತ್ಸವ ಸಮಾರಂಭದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜಯ್, ಭಗತ್ ಸಿಂಗ್ ಪಾತ್ರ ಮಾಡಬೇಕಿತ್ತು. ಇದಕ್ಕೆ ಸಿದ್ಧತೆ ಮಾಡಿಕೊಳ್ಳುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

'ಶನಿವಾರ ರಾತ್ರಿ ಮನೆಯಲ್ಲಿ ಪೋಷಕರು ಇಲ್ಲದೇ ಇರುವಾಗ ಸಂಜಯ್, ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದನು. ನೇಣಿಗೆ ಕೊರಳೊಡ್ಡುವ ಸಂದರ್ಭದ ಅಭಿನಯಕ್ಕೆ ಫ್ಯಾನಿಗೆ ನೂಲಿನ ಹಗ್ಗ ಕಟ್ಟಿಕೊಂಡಿದ್ದನು. ಸ್ಟೂಲ್ ಮೇಲೆ ನಿಂತು ಮುಖವನ್ನು ಟೋಪಿಯಿಂದ ಮುಚ್ಚಿಕೊಂಡು ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸ್ಟೂಲ್ ಜಾರಿ ನೇಣು ಬಿಗಿದುಕೊಂಡಿದೆ' ಎಂದು ಬಡಾವಣೆ ಠಾಣೆಗೆ ನೀಡಿದ ದೂರಿನಲ್ಲಿ ಪೋಷಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT