ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ಶನಿವಾರ ಬೆಂಗಳೂರಿಗೆ ಬರಲಿದೆ. ಮಂಗಳವಾರದವರೆಗೂ ಈ ತಂಡ ವಿವಿಧೆ ಪ್ರವಾಸ ಮಾಡಿ, ಅಧ್ಯಯನ ನಡೆಸಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ಅತಿವೃಷ್ಟಿ ಹಾಗೂ ಪ್ರವಾಹದಿಂದ ₹ 5,690 ಕೋಟಿ ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ ₹ 765 ಕೋಟಿ ಪರಿಹಾರ ದೊರೆಯಬೇಕಿದೆ. ಅಧಿಕಾರಿಗಳ ತಂಡ ವರದಿ ಸಲ್ಲಿಸಿದ ಬಳಿಕ ಈ ಮೊತ್ತ ಬಿಡುಗಡೆಯಾಗಲಿದೆ ಎಂದರು.
ಭೂಮಾಪಕರ ನೇಮಕ: ರಾಜ್ಯದಲ್ಲಿ ಭೂಮಾಪನಕ್ಕೆ ಸಂಬಂಧಿಸಿದ ಎರಡು ಲಕ್ಷ ಕಡತಗಳು ಬಾಕಿ ಇವೆ. ಅವುಗಳ ತ್ವರಿತ ವಿಲೇವಾರಿಗಾಗಿ 820 ಭೂಮಾಪಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಇನ್ನೂ 600 ಭೂಮಾಪಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.