ಬೆಂಗಳೂರು: ರಾಜ್ಯದ 28 ಜಿಲ್ಲೆಗಳಲ್ಲಿ ಒಟ್ಟು 630 ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ.

ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಾಗಿದ್ದು, ಆಧಾರ್ ನೋಂದಣಿ ಮತ್ತು ತಿದ್ದುಪಡಿಗೆ ಗ್ರಾಮೀಣ ಪ್ರದೇಶಗಳಲ್ಲಿ ಬೇಡಿಕೆ ಹೆಚ್ಚಿದೆ. ಹೀಗಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮೊದಲ ಹಂತದಲ್ಲಿ 28 ಜಿಲ್ಲೆಗಳಲ್ಲಿ ತಲಾ 22 ಗ್ರಾಮ ಪಂಚಾಯಿತಿಗಳಲ್ಲಿ ಈ ಸೌಲಭ್ಯ ಕಲ್ಪಿಸಲು ಸಿದ್ಧತೆ ಆರಂಭಿಸಿದೆ.

‘ಇ– ಆಡಳಿತ ಇಲಾಖೆ ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ನೋಂದಣಿ ಮಾಡಲು 2,000 ಟ್ಯಾಬ್ಲೆಟ್ ಮತ್ತು ‘ಸಿಂಗಲ್ ಫಿಂಗರ್ ಪ್ರಿಂಟ್’ ಸಾಧನಗಳನ್ನು ಒದಗಿಸಲಿದೆ. ಮೊದಲ ಹಂತದಲ್ಲಿ 630 ಸಾಧನಗಳನ್ನು ಇಲಾಖೆಗೆ ಹಸ್ತಾಂತರ ಮಾಡಲಾಗಿದೆ’ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಜಿ.ಪಂ ಸಿಇಒಗಳಿಗೆ ಪತ್ರ ಬರೆದಿದ್ದಾರೆ.

ಆಧಾರ್‌ನಲ್ಲಿ ಮೊಬೈಲ್ ಸಂಖ್ಯೆ ಮತ್ತು ಇ–ಮೇಲ್ ಐ.ಡಿ ಸೇರಿಸಲು ಪ್ರತಿ ವಹಿವಾಟಿಗೆ ₹ 50ರಂತೆ ಶುಲ್ಕ ವಿಧಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.