ಗುರುವಾರ , ಜೂನ್ 30, 2022
21 °C

ಲಸಿಕೆ ದುರ್ಬಳಕೆ: ಅಶ್ವತ್ಥನಾರಾಯಣ ವಜಾಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಲಸಿಕೆ ವಿತರಣೆಯಲ್ಲಿ ಸ್ವಜನ ಪಕ್ಷಪಾತ ನೀತಿ ಅನುಸರಿಸುತ್ತಿರುವ, ಲಸಿಕೆಯನ್ನು ದುರ್ಬಳಕೆ ಮಾಡುತ್ತಿರುವ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರನ್ನು ಈ ಹುದ್ದೆಯಿಂದ ಕೂಡಲೇ ವಜಾಗೊಳಿಸಿ’ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.

ಆನ್‌ಲೈನ್‌ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು ‘ಉಪ ಮುಖ್ಯಮಂತ್ರಿಯೂ ಆಗಿರುವ ಅಶ್ವತ್ಥನಾರಾಯಣ ಅವರಿಗೆ ರಾಜ್ಯದ ಜನರ ಹಿತ ಬೇಕಿಲ್ಲ. ಅವರು ತಾವು ಪ್ರತಿನಿಧಿಸುವ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ತಮ್ಮ ಬೆಂಬಲಿಗರು ಹೆಚ್ಚಿರುವ ಪ್ರದೇಶಗಳಲ್ಲಿ ಮೊದಲೇ ಟೋಕನ್‌ಗಳನ್ನು ವಿತರಿಸಿ ಲಸಿಕೆ ಹಾಕಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಜನರು ಲಸಿಕೆ ಪಡೆಯಲು ಮುಂಜಾನೆಯಿಂದಲೇ ಆರೋಗ್ಯ ಕೇಂದ್ರಗಳ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಹೀಗಿದ್ದರೂ ಯಾರಿಗೂ ಲಸಿಕೆ ಸಿಗುತ್ತಿಲ್ಲ. ಲಸಿಕೆ ನೀಡುವಿಕೆಯಲ್ಲೂ ಬಿಜೆಪಿ ಓಟ್‌ ಬ್ಯಾಂಕ್‌ ನೀತಿ ಅನುಸರಿಸುತ್ತಿದೆ. ಇದು ಈಗಾಗಲೇ ಸಾಬೀತಾಗಿದೆ. ಇದಕ್ಕೆ ಮುಖ್ಯಮಂತ್ರಿ ಹಾಗೂ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರು ಬೆನ್ನೆಲುಬಾಗಿ ನಿಂತಿದ್ದಾರೆ. ಹೀಗಾಗಿ ಅಶ್ವತ್ಥನಾರಾಯಣ ಅವರನ್ನು ವಜಾಗೊಳಿಸಬೇಕು. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಲಿದ್ದೇವೆ’ ಎಂದು ಅವರು ತಿಳಿಸಿದರು.  

ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಹಾಗೂ ಬೆಂಗಳೂರು ನಗರ ಎಸ್‌ಸಿ, ಎಸ್‌ಟಿ ವಿಭಾಗದ ಅಧ್ಯಕ್ಷ ಜಯಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು