ಬೆಂಗಳೂರು: ‘ಭೂ ಕಂದಾಯ ಕಾಯ್ದೆ 1964ರ 94-ಸಿ ಅಡಿಯಲ್ಲಿ ಭೂ ಮಂಜೂರಾತಿಗೆ ಫಲಾನುಭವಿಗಳ ಅರ್ಹತೆ ನಿಗದಿಪಡಿಸಲು ವಾರ್ಷಿಕ ಆದಾಯ ಮಿತಿ ₹ 1.20 ಲಕ್ಷಕ್ಕೆ ಹೆಚ್ಚಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರ ಬರೆದಿದ್ದಾರೆ.
‘ಈ ಕಾಯ್ದೆ ಅನ್ವಯ, ಭೂ ಮಂಜೂರಾತಿಗೆ ವಾರ್ಷಿಕ ಗರಿಷ್ಠ ಆದಾಯದ ಮಿತಿ ₹ 30 ಸಾವಿರ ನಿಗದಿಪಡಿಸಲಾಗಿದೆ. ಈ ಮಿತಿ ಹೆಚ್ಚಿಸಲು ಅನುಕೂಲ ಆಗುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
‘ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹ 1.20 ಲಕ್ಷ ಎಂದು ಸರ್ಕಾರ ನಿಗದಿಪಡಿಸಿದೆ. ಹೀಗಾಗಿ,ಭೂ ಮಂಜೂರಾತಿಗೂ ಅಷ್ಟೇ ಮಿತಿ ನಿಗದಿಪಡಿಸಬೇಕು’ ಎಂದು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಅವರು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.