ಭಾನುವಾರ, ಸೆಪ್ಟೆಂಬರ್ 25, 2022
22 °C

ಗೈರುಹಾಜರಿ: ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಲಾ ಅವಧಿಯಲ್ಲಿ ಅನಧಿಕೃತವಾಗಿ ಗೈರು ಹಾಜರಾಗುವ, ತಡವಾಗಿ ತರಗತಿಗಳಿಗೆ ಬರುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಮಿತಿ ಸಚಿವ ಬಿ.ಸಿ.ನಾಗೇಶ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಾಗಮಂಗಲ ತಾಲ್ಲೂಕು ನೆಲ್ಲಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈಚೆಗೆ ಭೇಟಿ ಕೊಟ್ಟಾಗ ಯಾವ ಶಿಕ್ಷಕರೂ ಶಾಲೆಗೆ ಬಂದಿರಲಿಲ್ಲ. ಮಕ್ಕಳು ಶಾಲಾ ಆವರಣದಲ್ಲೇ ಕುಳಿತಿದ್ದರು. ಇಂತಹ ಘಟನೆಗಳು ಶಿಕ್ಷಕರಿಗೆ ಶೋಭೆ ತರುವುದಿಲ್ಲ. ರಾಜ್ಯದ ಯಾವ ಶಾಲೆಗಳಲ್ಲೂ ಇಂತಹ ಘಟನೆಗಳು ಮರುಕಳಿಸಬಾರದು. ಮಕ್ಕಳ ಬೋಧನೆ, ಸುರಕ್ಷತೆಗೆ ಅಡ್ಡಿಯಾಗುವ ಶಿಕ್ಷಕರ ನಡೆ ಕ್ಷಮಿಸಲು ಸಾಧ್ಯವಿಲ್ಲ. ಶಿಸ್ತುಕ್ರಮ ಜರುಗಿಸಬೇಕು ಎಂದು ತಾಕೀತು ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು