ಎಸಿಬಿ ಅಸ್ತಿತ್ವವನ್ನೇ ಇಲ್ಲವಾಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಎಸಿಬಿ ನಿಷ್ಕ್ರಿಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ವಿಚಾರವಾಗಿ ಬುಧವಾರ ಟ್ವೀಟ್ ಮಾಡಿರುವ ಅವರು, ' ರಾಜ್ಯ ಸರ್ಕಾರದ ಹಲವಾರು ಸಚಿವರುಗಳ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ನೀಡಿದರೂ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಬಿಜೆಪಿ ಅವಧಿಯಲ್ಲಿ ಎಸಿಬಿ ನಿಷ್ಕ್ರಿಯವಾಗಿದೆ. ಎಸಿಬಿಯನ್ನು ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗಲೇ ವಿರೋಧಿಸಿದ್ದರು. ಈಗ ಅದರ ಅಸ್ತಿತ್ವವನ್ನೇ ಇಲ್ಲವಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ' ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಹಲವಾರು ಸಚಿವರುಗಳ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ನೀಡಿದರೂ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಎ.ಸಿ.ಬಿ @BJP4Karnataka ಅವಧಿಯಲ್ಲಿ ನಿಷ್ಕ್ರಿಯವಾಗಿದೆ. ಎಸಿಬಿಯನ್ನು ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗಲೇ ವಿರೋಧಿಸಿದ್ದರು. ಈಗ ಅದರ ಅಸ್ತಿತ್ವವನ್ನೇ ಇಲ್ಲವಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ.
— Siddaramaiah (@siddaramaiah) June 9, 2021
‘ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಭೂ ಹಗರಣ ಕಾರಣ. ಅದರ ಬಗ್ಗೆ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು. ವರ್ಗಾವಣೆ ಶಿಕ್ಷೆ ಅಲ್ಲ. ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.