ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಎಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ: ಅಪಾರ ಪ್ರಮಾಣದ ಆಸ್ತಿ ಪತ್ತೆ

Last Updated 22 ಜನವರಿ 2021, 17:38 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದಲ್ಲಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಸಿ.ಟಿ. ಆಂಜನಪ್ಪ ಅವರ ಬೆಂಗಳೂರು ಮತ್ತು ದಾವಣಗೆರೆ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ.

ಬಿಬಿಎಂಪಿ ಬೊಮ್ಮನಹಳ್ಳಿ ಉಪವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಜೀವನಬಿಮಾನಗರದಲ್ಲಿನ ವಾಸದ ಮನೆ, ಸ್ವಂತ ಊರಾದ ದಾವಣಗೆರೆ ಜಿಲ್ಲೆಯ ಲೋಕಿಕೆರೆ ಗ್ರಾಮದ ವಾಸದ ಮನೆ, ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಯಲ್ಲಿರುವ ತೋಟದ ಮನೆ, ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ಶೋಧದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ಪತ್ತೆಯಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT