ಕಟ್ಟಡಕ್ಕೆ ಒ.ಸಿ ನೀಡಲು ₹20 ಲಕ್ಷ ಲಂಚ: ಭ್ರಷ್ಟಾಚಾರ ನಿಗ್ರಹ ದಳ ದಾಳಿ

ಬೆಂಗಳೂರು: ಕಾಮಗಾರಿ ಪೂರ್ಣಗೊಂಡಿದ್ದ ಖಾಸಗಿ ಕಟ್ಟಡದ ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ನೀಡಲು ₹ 20 ಲಕ್ಷ ಲಂಚ ಪಡೆಯುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಬೊಮ್ಮನಳ್ಳಿ ವಲಯದ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)/ಶುಕ್ರವಾರ ಬಂಧಿಸಿದೆ.
ಸಿಗ್ಮೀಸ್ ಬ್ರಿವರೀಸ್ ಕಂಪನಿಯ ಘಟಕ ಆರಂಭಕ್ಕಾಗಿ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಖಾಸಗಿ ನಿವೇಶನದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಒ.ಸಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು.
₹40 ಲಕ್ಷ ಲಂಚ ನೀಡಿದರೆ ಒ.ಸಿ ನೀಡುವುದಾಗಿ ದೇವೇಂದ್ರಪ್ಪ ಬೇಡಿಕೆ ಇಟ್ಟಿದ್ದರು. ಈ ಕುರಿತು ಸಿಗ್ಮಿ ಬ್ರೀವರೀಸ್ ವ್ಯವಸ್ಥಾಪಕರು ಎಸಿಬಿಗೆ ದೂರು ನೀಡಿದ್ದರು.
ಶುಕ್ರವಾರ ₹20 ಲಕ್ಷ ಲಂಚ ಪಡೆಯುತ್ತಿದ್ದಾಗ ದೇವೇಂದ್ರಪ್ಪ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.