ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲದಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದ ಮೊದಲ ಆರೋಪಿ ಹುಲಿಕುಂಟೆ ಗ್ರಾಮದ ವಿನಯ್‌ಗೆ ಬಿಜೆಪಿಯ ಪ್ರಭಾವಿ ಸಚಿವ ಮತ್ತು ಮುಖಂಡರ ಜೊತೆ ಸಂಪರ್ಕವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸಚಿವ ಆರ್. ಅಶೋಕ, ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಮತ್ತು ಆರೋಪಿ ವಿನಯ್ ಜೊತೆಗಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಎಂದು ಕೆಪಿಸಿಸಿ ರಾಜ್ಯ ಮಾಧ್ಯಮ ಕಾರ್ಯದರ್ಶಿ
ಜಿ.ಲಕ್ಷ್ಮಿಪತಿ ಆರೋಪಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಯ್ ಕಾಂಗ್ರೆಸ್ ಬೆಂಬಲಿಗ ಎಂದು ಬಿಂಬಿಸಲು ಯತ್ನಿಸಿದ್ದ ಬಿಜೆಪಿಯವರ ಅಸಲಿ ಮುಖ ಈಗ ಬಯಲಾಗಿದೆ ಎಂದರು. ಆರೋಪಿ ವಿನಯ್, ಸಚಿವ ಅಶೋಕ ಮತ್ತು ಬಿಜೆಪಿ ಮುಖಂಡರು ಜೊತೆಗಿರುವ ಫೋಟೊಗಳನ್ನು ಅವರು ತಮ್ಮ ಮೊಬೈಲ್‌ನಲ್ಲಿ ತೋರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.