ಸೋಮವಾರ, ಜುಲೈ 4, 2022
25 °C

ವರದಿ ಪರಿಶೀಲಿಸಿ ಕ್ರಮ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು, ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ್ದಾರೆ ಎನ್ನಲಾದ ಆರೋಪ ಕುರಿತು ಘಟನೆಯ ವರದಿ ತರಿಸಿಕೊಂಡು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ತಿಳಿಸಿದ್ದಾರೆ.

ಈ ಕುರಿತಂತೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದ ನಿಯೋಗ ಅವಸ್ಥಿ ಅವರನ್ನು ಗುರುವಾರ ಮಧ್ಯಾಹ್ನ ಹೈಕೋರ್ಟ್‌ನಲ್ಲಿ ಭೇಟಿ ಮಾಡಿ ಚರ್ಚಿಸಿತು. ಮುಖ್ಯ ನ್ಯಾಯಮೂರ್ತಿಗಳು ವರದಿ ತರಿಸಿಕೊಂಡು ಪರಿಶೀಲಿಸುವುದಾಗಿ ನಿಯೋಗಕ್ಕೆ ತಿಳಿಸಿದ್ದಾರೆ. ‘ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು,ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಬೇಕು‘ ಎಂದು ವಿವೇಕ್‌ ಸುಬ್ಬಾರೆಡ್ಡಿ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು