ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಿ.ಟಿ. ರವಿ

Last Updated 3 ಮೇ 2021, 12:16 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜನಗರ ದುರಂತದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲೇ ಬೇಕು. ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರೆ ಸರ್ಕಾರವೇ ಹೊಣೆ ಹೊರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಇಂತಹ ದುರಂತಕ್ಕೆ ಕಾರಣರಾದವರಿಗೆ ಕಠಿಣ ಕ್ರಮ ಜರುಗಿಸಿದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದನ್ನು ತಪ್ಪಿಸಬಹುದು. ಕೂಡಲೇ ತನಿಖೆ ನಡೆಸಿ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಿವಿಧ ಜಿಲ್ಲೆಗಳಲ್ಲಿನ ಆಮ್ಲಜನಕದ ಕೊರತೆ ಬಗ್ಗೆ ಚರ್ಚಿಸಿದ್ದೇನೆ. ವಿವಿಧ ರಾಜ್ಯಗಳಲ್ಲಿ ನಡೆದ ದುರ್ಘಟನೆಗಳು ಪಾಠ ಆಗಬೇಕಿತ್ತು. ಇಂದು ನಮ್ಮ ರಾಜ್ಯದಲ್ಲೂ ಆಗಿದೆ. ಎಚ್ಚೆತ್ತುಕೊಳ್ಳಬೇಕಾಗಿತ್ತು. ಜನತೆ ಜೀವ ಕೈಯಲ್ಲಿ ಹಿಡಿದು ಬದುಕಬೇಕಾದ ಸ್ಥಿತಿ ಇದೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT