ಶನಿವಾರ, ಮಾರ್ಚ್ 25, 2023
23 °C

ಮತಾಂತರ ನಿಷೇಧ: ಲವ್ ಜಿಹಾದ್‌ ವಿರುದ್ಧವೂ ಕ್ರಮ -ಆರಗ ಜ್ಞಾನೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಮತಾಂತರ ನಿಷೇಧ ಕಾಯ್ದೆಯಲ್ಲಿ ಲವ್ ಜಿಹಾದ್ ಪ್ರಕರಣಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಅವಕಾಶವಿದೆ. ಇದರಲ್ಲಿ ಯಾವುದೇ ತೊಡಕುಗಳಿದ್ದರೆ, ತಿದ್ದುಪಡಿ ಮಾಡಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

‘ವಿವಾಹದ ನೆಪದಲ್ಲಿ ಯಾರನ್ನೂ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವಂತಿಲ್ಲ. ಬಲವಂತದಿಂದ ಮತಾಂತರ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಲವ್‌ ಜಿಹಾದ್‌ಗೆ ಸಂಬಂಧಿಸಿ ರಾಜ್ಯದಲ್ಲಿ ಈಗಾಗಲೇ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದರು.

‘ಸ್ವಯಂ ಪ್ರೇರಣೆಯಿಂದ ಮತಾಂತರಗೊಳ್ಳುವವರು ಮೊದಲು ಸರ್ಕಾರಕ್ಕೆ ತಿಳಿಸಬೇಕು. ಉತ್ತರ ಪ್ರದೇಶದಲ್ಲಿ ಈ ಕಾಯ್ದೆಗಾಗಿ ಕಾರ್ಯಪಡೆ ರಚಿಸಲಾಗಿದೆ. ಆದರೆ, ಕರ್ನಾಟಕದ ಪರಿಸ್ಥಿತಿ ವಿಭಿನ್ನವಾಗಿದ್ದು ಇಲ್ಲಿ ಕಾರ್ಯಪಡೆ ಅಗತ್ಯವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು