ಸೋಮವಾರ, ಸೆಪ್ಟೆಂಬರ್ 20, 2021
23 °C

ಅಕ್ರಮ ವಲಸಿಗರನ್ನು ಹೊರಹಾಕಲು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ಅಕ್ರಮ ವಲಸಿಗರನ್ನು ಹೊರಹಾಕಲು ಪ್ರಯತ್ನ ನಡೆಯುತ್ತಿದೆ. ವೀಸಾ ಅವಧಿ ಮುಗಿದಿರುವವರನ್ನು ಬಂಧಿಸಬೇಕು, ಇಲ್ಲವೇ ಹೊರ ದಬ್ಬಬೇಕು. ಈ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಲವರು ಉದ್ದೇಶಪೂರ್ವಕವಾಗಿ ಸಣ್ಣಪುಟ್ಟ ಕೇಸು ಹಾಕಿಸಿಕೊಂಡು ಇಲ್ಲಿ ಇರುತ್ತಾರೆ. ಇಲ್ಲಿಯೇ ನೆಲೆಸಲು ಪ್ರಯತ್ನ ನಡೆಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

‘ಅಕ್ರಮ ವಲಸಿಗರ ಸಮಸ್ಯೆ ಬೆಂಗಳೂರಿನಲ್ಲಿ ಜಾಸ್ತಿ ಇದೆ. ಯಾವ್ಯಾವ ಪ್ರದೇಶದಲ್ಲಿ ಇದ್ದಾರೆ ಎಂಬ ಬಗ್ಗೆ ಸಮೀಕ್ಷೆ ನಡೆಯುತ್ತಿದೆ’ ಎಂದು ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು