ಮಂಗಳವಾರ, ಏಪ್ರಿಲ್ 20, 2021
27 °C

ಸಿಡಿ ಪ್ರಕರಣ| ಸಂತ್ರಸ್ತೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ: ಡಿಸಿಪಿ ಅನುಚೇತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯುವತಿಯೊಬ್ಬರ ಜೊತೆ ಸಲುಗೆ ಬೆಳೆಸಿ ಲೈಂಗಿಕ ಸಂಪರ್ಕವಿಟ್ಟುಕೊಂಡಿದ್ದ ಸಚಿವರೊಬ್ಬರ ‘ಸಿ.ಡಿ’ ಬಗ್ಗೆ ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ್‌ ಕಲ್ಲಹಳ್ಳಿ ಅವರು ನಗರದ ಕಬ್ಬನ್ ಪಾರ್ಕ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:  

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ‘ದಿನೇಶ್ ಎಂಬುವರು ಠಾಣೆಗೆ ಬಂದು ನಮಗೊಂದು ದೂರು ಕೊಟ್ಟಿದ್ದಾರೆ. ತನಿಖೆ ಆರಂಭಿಸಲಾಗಿದ್ದು, ಸಂತ್ರಸ್ತೆ ಹಾಗೂ ಅವರ ಕುಟುಂಬದವರನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ಇದನ್ನೂ ಓದಿ:  

‘ಸಚಿವರು, ಮಹಿಳೆಗೆ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಹಾಗೂ ಕುಟುಂಬಸ್ಥರು, ತನಗೆ ತಿಳಿಸಿರುವುದಾಗಿ ದೂರುದಾರ ದಿನೇಶ್ ಹೇಳಿದ್ದಾರೆ. ಅವರಿಂದ ಮತ್ತಷ್ಟು ಮಾಹಿತಿ ಪಡೆಯಬೇಕಿದೆ. ನಾವೇ ಸಂತ್ರಸ್ತೆ ಹಾಗೂ ಕುಟುಂಬದವರನ್ನು ಸಂಪರ್ಕಿಸಿ ಹೇಳಿಕೆ ಪಡೆದು ಮುಂದಿನ ಕ್ರ ಕೈಗೊಳ್ಳುತ್ತೇವೆ’ ಎಂದೂ ಅವರು ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು