ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Updates: 7 ಸಾವಿರದ ಗಡಿ ದಾಟಿದ ಸಕ್ರಿಯ ಪ್ರಕರಣ

Last Updated 9 ಮಾರ್ಚ್ 2021, 21:23 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಎರಡು ವಾರದಿಂದ ಪ್ರತಿನಿತ್ಯ ಸರಾಸರಿ 500 ಪ್ರಕರಣಗಳು ವರದಿಯಾಗುತ್ತಿರುವ ಪರಿಣಾಮ 5 ಸಾವಿರದ ಗಡಿಯ ಆಸುಪಾಸಿನಲ್ಲಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ 7 ಸಾವಿರದ ಗಡಿ (7,033) ದಾಟಿದೆ.

ಮಂಗಳವಾರ 590 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9.56 ಲಕ್ಷ ದಾಟಿದೆ.

ಈ ತಿಂಗಳು 9 ದಿನಗಳ ಅವಧಿಯಲ್ಲಿ 4,790 ಮಂದಿ ಕೋವಿಡ್ ಪೀಡಿತರಾಗಿರುವುದು ಖಚಿತಪಟ್ಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ನಾಲ್ವರು ಹಾಗೂ ಧಾರವಾಡ, ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದವರ ಒಟ್ಟು ಸಂಖ್ಯೆ 12,373ಕ್ಕೆ ತಲುಪಿದೆ.

ಕೋವಿಡ್ ಪೀಡಿತರಲ್ಲಿ 366 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 9.36 ಲಕ್ಷ ದಾಟಿದೆ.

ಒಂದು ದಿನದ ಅವಧಿಯಲ್ಲಿ 66 ಸಾವಿರ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೆ 1.94 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

ಬೆಂಗಳೂರಿನಲ್ಲಿ 363 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.08 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 56 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 54,265ಕ್ಕೆ ತಲುಪಿದೆ. ಬಳ್ಳಾರಿ ಯಲ್ಲಿ 26, ಕಲಬುರ್ಗಿಯಲ್ಲಿ 25, ಬೆಳಗಾವಿಯಲ್ಲಿ 15, ತುಮಕೂರಿನಲ್ಲಿ 14, ಉಡುಪಿಯಲ್ಲಿ 12, ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 11 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

43 ಸಾವಿರ ಮಂದಿಗೆ ಲಸಿಕೆ: ರಾಜ್ಯದಲ್ಲಿ ಮಂಗಳವಾರ 964 ಕಡೆ ಕೋವಿಡ್‌ ಲಸಿಕೆ ವಿತರಣೆ ಅಭಿಯಾನ ನಡೆದಿದ್ದು, 43,394 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಇವರಲ್ಲಿ 26,385 ಮಂದಿ ಹಿರಿಯ ನಾಗರಿಕರು ಸೇರಿದ್ದಾರೆ. ಈವರೆಗೆ 10.57 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ.

4.67 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಇವರಲ್ಲಿ 2.56 ಲಕ್ಷ ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರಲ್ಲಿ 1.37 ಲಕ್ಷ ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. 45ರಿಂದ 60 ವರ್ಷದೊಳಗಿನ ಕೋವಿಡೇತರ ಕಾಯಿಲೆ ಎದುರಿಸು ತ್ತಿರುವವರಲ್ಲಿ 23,236 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.

ಈವರೆಗೆ 23 ಮಂದಿಯಲ್ಲಿ ಮಾತ್ರ ತೀವ್ರ ಮತ್ತು ಗಂಭೀರ ಸ್ವರೂಪದ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿವೆ.

43 ಸಾವಿರ ಮಂದಿಗೆ ಲಸಿಕೆ: ರಾಜ್ಯದಲ್ಲಿ ಮಂಗಳವಾರ 964 ಕಡೆ ಕೋವಿಡ್‌ ಲಸಿಕೆ ವಿತರಣೆ ಅಭಿಯಾನ ನಡೆದಿದ್ದು, 43,394 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಇವರಲ್ಲಿ 26,385 ಮಂದಿ ಹಿರಿಯ ನಾಗರಿಕರು ಸೇರಿದ್ದಾರೆ. ಈವರೆಗೆ 10.57 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. 4.67 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಇವರಲ್ಲಿ 2.56 ಲಕ್ಷ ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರಲ್ಲಿ 1.37 ಲಕ್ಷ ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. 45ರಿಂದ 60 ವರ್ಷದೊಳಗಿನ ಕೋವಿಡೇತರ ಕಾಯಿಲೆ ಎದುರಿಸುತ್ತಿರುವವರಲ್ಲಿ 23,236 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಈವರೆಗೆ 23 ಮಂದಿಯಲ್ಲಿ ಮಾತ್ರ ತೀವ್ರ ಮತ್ತು ಗಂಭೀರ ಸ್ವರೂಪದ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT