ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರೂಪಾಂತರ ಕೋವಿಡ್ ಪೀಡಿತರ ಸಂಖ್ಯೆ 14ಕ್ಕೆ ಏರಿಕೆ

Last Updated 14 ಜನವರಿ 2021, 19:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಗುರುವಾರ 408 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದ್ದು, ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.29 ಲಕ್ಷ ದಾಟಿದೆ.

ಸೋಂಕಿತರಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,155ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 564 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 9.08 ಲಕ್ಷಕ್ಕೆ ತಲುಪಿದೆ. 8,728 ಮಂದಿ ಕೋವಿಡ್‌ ಪೀಡಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ ಸದ್ಯ 187 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.

ಒಂದೇ ದಿನ 1.06 ಲಕ್ಷ ಆರ್‌ಟಿ–ಪಿಸಿಆರ್ ಸೇರಿದಂತೆಕೋವಿಡ್‌ರ‍್ಯಾಪಿಡ್‌ ಪರೀಕ್ಷೆ ನಡೆಸಲಾಗಿದೆ. ಈ ತಿಂಗಳ13 ದಿನಗಳಲ್ಲಿ 15ಲಕ್ಷ ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ.

ರೂಪಾಂತರ ಕೋವಿಡ್: 14ಕ್ಕೆ ಏರಿಕೆ

ರಾಜ್ಯದಲ್ಲಿ ಮತ್ತೊಬ್ಬರಿಗೆ ರೂಪಾಂತರಗೊಂಡ ಕೊರೊನಾ ವೈರಾಣು ಇರುವುದು ದೃಢಪಟ್ಟಿದೆ. ಇದರಿಂದಾಗಿ ಹೊಸ ಮಾದರಿಯ ಕೋವಿಡ್ ಪೀಡಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ಬ್ರಿಟನ್‌ನಿಂದ ಬಂದು ಸೋಂಕಿತ ರಾದವರು ಹಾಗೂ ಸಂಪರ್ಕಿತ ಕೋವಿಡ್ ಪೀಡಿತರ ಮಾದರಿಯನ್ನು ಜೆನೆಟಿಕ್ ಸೀಕ್ವೆನ್ಸ್ ಪರೀಕ್ಷೆಗೆ ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ ಬೆಂಗಳೂರು ಗ್ರಾಮಾಂತರದ ವ್ಯಕ್ತಿಯೊಬ್ಬರಲ್ಲಿ ರೂಪಾಂತರ ಮಾದರಿಯ ವೈರಾಣು ಇರುವುದು ದೃಢಪಟ್ಟಿದೆ. ಕಳೆದ ಡಿ.9 ರ ಬಳಿಕ 5,056 ಮಂದಿ ಬ್ರಿಟನ್‌ನಿಂದ ಇಲ್ಲಿಗೆ ಬಂದಿದ್ದಾರೆ. ಈವರೆಗೆ ಅಲ್ಲಿಂದ ಬಂದವರಲ್ಲಿ 46 ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ.
ಸಂಪರ್ಕಿತರಲ್ಲಿ 26 ಮಂದಿ ಸೋಂಕಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT