ಮಂಗಳವಾರ, ಮಾರ್ಚ್ 2, 2021
18 °C

ಕೋವಿಡ್: ಸಕ್ರಿಯ ಪ್ರಕರಣ 8,694 ಸಾವಿರಕ್ಕೆ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್‌ ಪ್ರಕರಣಗಳ ಸಂಖ್ಯೆ ಕೆಲ ದಿನಗಳಿಂದ ಸಾವಿರದ ಗಡಿಯೊಳಗೆ ಇರುವ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 8,694ಕ್ಕೆ ಇಳಿಕೆಯಾಗಿದೆ.

ಕಳೆದ ತಿಂಗಳು ಈ ವೇಳೆ 15,476 ಸಕ್ರಿಯ ಪ್ರಕರಣಗಳಿದ್ದವು. ರಾಜ್ಯದಲ್ಲಿ ಹೊಸದಾಗಿ 584 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.31 ಲಕ್ಷ ದಾಟಿದೆ. ಸೋಂಕಿತರಲ್ಲಿ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,162ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 676 ಮಂದಿ ಗುಣಮುಖರಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 9.10 ಲಕ್ಷಕ್ಕೆ ತಲುಪಿದೆ. ಸೋಂಕಿತರಲ್ಲಿ ಸದ್ಯ 181 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.

ಒಂದೇ ದಿನ 95 ಸಾವಿರ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ತಿಂಗಳು 16 ದಿನಗಳಲ್ಲಿ 16.88 ಲಕ್ಷ ಮಂದಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಈವರೆಗೆ 1.58 ಕೋಟಿ ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ಕಳೆದ 14 ದಿನಗಳ ಅವಧಿಯಲ್ಲಿ 56 ಸಾವಿರ ನೇರ ಹಾಗೂ 63 ಸಾವಿರ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ.

ಕಳೆದ ಡಿ.9 ರ ಬಳಿಕ 5,358 ಮಂದಿ ಬ್ರಿಟನ್‌ನಿಂದ ಇಲ್ಲಿಗೆ ಬಂದಿದ್ದಾರೆ. ಈವರೆಗೆ ಅಲ್ಲಿಂದ ಬಂದವರಲ್ಲಿ 47 ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ. ಸಂಪರ್ಕಿತರಲ್ಲಿ 26 ಮಂದಿ ಸೋಂಕಿತರಾಗಿದ್ದಾರೆ. 14 ಮಂದಿಯಲ್ಲಿ ರೂಪಾಂತರ ವೈರಾಣು ಕಾಣಿಸಿಕೊಂಡಿದೆ.

ಬೆಂಗಳೂರಿನಲ್ಲಿ 282 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.94 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 36 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 52,990ಕ್ಕೆ ತಲುಪಿದೆ. ತುಮಕೂರು ಹಾಗೂ ಬೆಳಗಾವಿಯಲ್ಲಿ ತಲಾ 35 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 2, ದಕ್ಷಿಣ ಕನ್ನಡ ಹಾಗೂ ಕೊಪ್ಪಳದಲ್ಲಿ ತಲಾ ಒಂದು ಮರಣ ಪ್ರಕರಣಗಳು ಹೊಸದಾಗಿ ವರದಿಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು