ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಚೇತನ್

Last Updated 26 ಜೂನ್ 2021, 21:10 IST
ಅಕ್ಷರ ಗಾತ್ರ

ಬೆಂಗಳೂರು: ತಮ್ಮ ವಿರುದ್ಧ ಅನಗತ್ಯವಾಗಿ ಟೀಕಿಸಿ, ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿರುವ ನಟ ಚೇತನ್ ಅಹಿಂಸಾ ಅವರು, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

‘ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿರುವ ಚೇತನ್‌, ತಮಗಾದ ಮಾನನಷ್ಟಕ್ಕೆ ₹1 ಪರಿಹಾರ ನೀಡಬೇಕು. ಶಿವರಾಮ ಹೆಬ್ಬಾರ್ ಅವರು ಬೇಷರತ್ ಕ್ಷಮೆ ಯಾಚಿಸಬೇಕು’ ಎಂದು ಕೋರಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.

‘ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡುವ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಶಿವರಾಮ ಹೆಬ್ಬಾರ್ ಟ್ವೀಟ್ ಮಾಡಿದ್ದರು. ಅವರ ಕಮೆಂಟ್‌ಗಳಲ್ಲಿ ಸತ್ಯಾಂಶ ಇಲ್ಲ. ನನ್ನ ಪ್ರತಿಷ್ಠೆ, ವೈಯಕ್ತಿಕ ಹಾಗೂ ವೃತ್ತಿಪರ ಖ್ಯಾತಿ ಹಾಳು ಮಾಡುವ ಉದ್ದೇಶ ಹೊಂದಿದೆ’ ಎಂದು ದೂರಿನಲ್ಲಿ ಚೇತನ್ ತಿಳಿಸಿದ್ದಾರೆ.

ಬ್ರಾಹ್ಮಣ್ಯವನ್ನು ಟೀಕಿಸಿ ಚೇತನ್ ನೀಡಿದ ಹೇಳಿಕೆ ಉಲ್ಲೇಖಿಸಿದ್ದ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಅಧ್ಯಕ್ಷರು, ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದ ಸಂಬಂಧ ಚೇತನ್, ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT