ಶನಿವಾರ, ಸೆಪ್ಟೆಂಬರ್ 18, 2021
28 °C

ಆರ್‌ಎಸ್‌ಎಸ್‌, ಕಾಂಗ್ರೆಸ್‌ ಒಂದಕ್ಕೊಂದು ಬೆಸೆದುಕೊಂಡಿದೆ: ನಟ ಚೇತನ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಬ್ರಾಹ್ಮಣ್ಯ, ಸಿದ್ದರಾಮಯ್ಯ ಅವರ ಕುರಿತು ಮಾತನಾಡಿದ್ದ ನಟ ಆ ದಿನಗಳು ಚೇತನ್‌ ಈಗ, ಕಾಂಗ್ರೆಸ್‌, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದಾರೆ. 

ಇದನ್ನೂ ಓದಿ: ಕುಮಾರಸ್ವಾಮಿ ಅವರ ‘ಕ್ರಾಂತಿಕಾರಿ’ ಮಾತುಗಳೆಲ್ಲವೂ ಅಸಂಬದ್ಧ: ನಟ ಚೇತನ್‌

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ‘ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವು ಏನನ್ನು ಬೇಕಾದರೂ ಮಾಡುತ್ತದೆ. ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಬಿಜೆಪಿ, ಎರಡನ್ನೂ ಮಣಿಸಬೇಕು,’ ಎಂದು ಹೇಳಿದ್ದಾರೆ. 

‘ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ನಮ್ಮ ಸಮಾನತೆಯ ಸಿದ್ಧಾಂತತದಿಂದ ಬಿಜೆಪಿಯ ಸಿದ್ಧಾಂತವನ್ನು ಧ್ವಂಸ ಮಾಡಬಹುದು,’ ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯ ಬೇರೂರಿಸುವ ನಾಯಕ: ನಟ ಚೇತನ್

‘ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‌ಎಸ್‌ಎಸ್‌ ಅನ್ನು ಸ್ಥಾಪಿಸಿದರು. ಕಾಂಗ್ರೆಸ್‌ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರಿಂದ ಪ್ರಭಾವಿತರಾದರು. ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್‌ ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ.  ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್‌ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ ಎರಡನ್ನೂ ಸೋಲಿಸಬೇಕು ಎಂದು ಅವರು ಬರೆದುಕೊಂಡಿದ್ದಾರೆ. 

ಇದನ್ನೂ ಓದಿ: ಸ್ವ–ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈಜಾಕ್‌ ಮಾಡಲು ಬಿಡಬಾರದು: ನಟ ಚೇತನ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು