ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ’ಗೆ ನಟ ಅನಂತನಾಗ್‌ ಆಯ್ಕೆ

Last Updated 7 ಜನವರಿ 2023, 19:45 IST
ಅಕ್ಷರ ಗಾತ್ರ

ಹೊನ್ನಾವರ: ಕೆರೆಮನೆ ಶಿವರಾಮ ಹೆಗಡೆ ಹೆಸರಿನಲ್ಲಿ ಕೆರೆಮನೆ ಶ್ರೀಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ವತಿಯಿಂದ ವಾರ್ಷಿಕವಾಗಿ ನೀಡಲಾಗುವ ‘ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ’ಗೆ ಈ ಬಾರಿ ಚಲನಚಿತ್ರ ನಟ ಅನಂತನಾಗ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

‘ಕೆರೆಮನೆ ಗಜಾನನ ಹೆಗಡೆ’ ವಾರ್ಷಿಕ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಶಿರಳಗಿ ತಿಮ್ಮಪ್ಪ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ₹15 ಸಾವಿರ ನಗದು ಹಾಗೂ ಸನ್ಮಾನ ಪತ್ರ ಒಳಗೊಂಡಿದೆ. ಫೆ. 3ರಿಂದ 5 ದಿನಗಳ ಕಾಲ ಗುಣವಂತೆಯಲ್ಲಿ ನಡೆಯುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT