ಬುಧವಾರ, ಜುಲೈ 6, 2022
22 °C

ನಟ ಚೇತನ್‌ಗೆ ಜಾಮೀನು ಮಂಜೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಬರಹ ಪ್ರಕಟಿಸಿದ್ದಾರೆ’ ಎಂದ ಆರೋಪದಡಿ ಬಂಧಿಸಲಾಗಿರುವ ನಟ ಎ. ಚೇತನ್ ಕುಮಾರ್ ಅವರಿಗೆ ಶುಕ್ರವಾರ ಜಾಮೀನು ಮಂಜೂರಾಗಿದೆ.

‘ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಉಂಟು ಮಾಡುವ ಹೇಳಿಕೆ ಪ್ರಚುರಪಡಿಸಿದ (ಐಪಿಸಿ 505 (2) ಹಾಗೂ ಅಪರಾಧ ಕೃತ್ಯ ಕೈಗೊಳ್ಳಲು ಪ್ರಚೋದನೆ (ಐಪಿಸಿ 504) ನೀಡಿದ್ದಾರೆ’ ಎಂಬ ಆರೋಪದಡಿ ಶೇಷಾದ್ರಿಪುರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು.

ಚೇತನ್ ಅವರನ್ನು ಫೆ. 22ರಂದು ಬಂಧಿಸಿದ್ದ ಪೊಲೀಸರು, ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. 14 ದಿನಗಳವರೆಗೆ ಚೇತನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಚೇತನ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಕೋರಿ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ‘ಇಬ್ಬರು ಸರ್ಕಾರಿ ನೌಕರರ ಶ್ಯೂರಿಟಿ ನೀಡಬೇಕು. ತನಿಖಾಧಿಕಾರಿ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಮುಂದಿನ ವಿಚಾರಣೆಗಳಿಗೆ ಹಾಜರಾಗಬೇಕು’ ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು