ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಬ್ರಾಹ್ಮಣ್ಯ ಬೇರೂರಿಸುವ ನಾಯಕ: ನಟ ಚೇತನ್

Last Updated 4 ಸೆಪ್ಟೆಂಬರ್ 2021, 16:43 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿವಾದಿ ನಾಯಕ’ ಎಂದು ಚಿತ್ರನಟ ಚೇತನ್‌ ಅಹಿಂಸಾ, ಟ್ವಿಟರ್‌ನಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.

ಶನಿವಾರ ಟ್ವೀಟ್‌ ಮಾಡಿರುವ ಚೇತನ್ ಅದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲೂ ಬರೆದುಕೊಂಡಿ
ದ್ದಾರೆ. ‘ಸಿದ್ದರಾಮಯ್ಯ ಕರ್ನಾಟಕ ಮತ್ತು ಕಾಂಗ್ರೆಸ್‌ನ ಪ್ರಬಲ ನಾಯಕ. ಆದರೆ, ಬ್ರಾಹ್ಮಣ್ಯವನ್ನು ಆಳವಾಗಿ ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ’ ಎಂದು ಹೇಳಿದ್ದಾರೆ.

‘ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ಜಾತಿ ವಿರೋಧಿ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯನವರ ಸೇವೆ ಅವರು ಹುಟ್ಟಿದ ಜಾತಿಗೆ ಮಾತ್ರ ಸೀಮಿತವಾಗಿದ್ದು, ಇತರ ಬಹು ಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತನಾಡುತ್ತಾರೆ’ ಎಂದು ಟೀಕಿಸಿದ್ದಾರೆ.

ಚೇತನ್‌ ಅವರ ಟ್ವೀಟ್‌ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.

ಹಲವರು ಚೇತನ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚೇತನ್ ಬಣ್ಣ ಈಗ ಬಯಲಾಯಿತು ಎಂದು ಕೆಲವರು
ವ್ಯಂಗ್ಯವಾಡಿದ್ದರೆ, ಇನ್ನೂ ಕೆಲವರು ಅವರ ಹೇಳಿಕೆಗೆ ಸಹಮತ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT