ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ಎಂದರೇನು? ಎಂದು ಅದರ ಗುಣಗಾನ ಮಾಡಿದ ನಟ ಜಗ್ಗೇಶ್

Last Updated 6 ಅಕ್ಟೋಬರ್ 2021, 9:48 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಘದ ಬಗ್ಗೆ ಮಾತನಾಡುವ ಮುನ್ನ ಅದರ ನಿಸ್ವಾರ್ಥ ಗುಣ ಅರಿಯಿರಿ‘ ಎಂದು ನಟ ಜಗ್ಗೇಶ್ ಟ್ವಿಟರ್‌ನಲ್ಲಿ ಆರ್‌ಎಸ್‌ಎಸ್‌ ಗುಣಗಾನ ಮಾಡಿದ್ದಾರೆ.

ಇತ್ತೀಚೆಗೆ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಕೆಲ ರಾಜಕೀಯ ನಾಯಕರು ಆರ್‌ಎಸ್‌ಎಸ್ ಬಗ್ಗೆ ನೀಡಿದ್ದ ಹೇಳಿಕೆಗಳ ಹಿನ್ನೆಲೆಯಲ್ಲಿ ಜಗ್ಗೇಶ್ ತಮ್ಮ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸರಣಿ ಟ್ವೀಟ್ ಮಾಡಿರುವ ಅವರು, ‘ನಾನು ಕಂಡ ಆರ್‌ಎಸ್‌ಎಸ್‌ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ. ಕೊರೊನಾ ಸಂದರ್ಭವಾಗಲಿ,ನೆರೆ ಬಂದ ಸಂದರ್ಭವಾಗಲಿ,ರಾಷ್ಟ್ರಕ್ಕೆ ಸಂಕಷ್ಟ ಬಂದಾಗಲೂ ಆಗಲಿ, ವಿಧ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ. ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃ ಹೃದಯಿ ಸಂಸ್ಥೆ ಎಂದರೆ ಅದು ಆರ್‌ಎಸ್‌ಎಸ್‌ ಒಂದೆ‘ ಎಂದು ಜಗ್ಗೇಶ್ ಹೇಳಿದ್ದಾರೆ.

‘ಆ ಸಂಸ್ಥೆಯ ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥಬಿಟ್ಟು ಸಮಾಜಕ್ಕೆ ಹೆಗಲುಕೊಡುವ ಕರ್ಮಯೋಗಿ ಆಗುತ್ತಾನೆ. ದೂರನಿಂತು ಬೆಟ್ಟ ನೋಡುವರಿಗೂ, ಆ ಬೆಟ್ಟ ಏರಿದವರಿಗೂ ವಿವರಣೆಗೆ ವ್ಯತಾಸವುಂಟು! ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು ಕಾರಣ ಅದರ ಮಾತೃರೂಪ ಹಾಗು ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ‌ ಸಂಘವಿದು‘ ಎಂದು ಹೇಳಿದ್ದಾರೆ.

‘ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿಧ್ಯಾವಂತರು ರಾಷ್ಟ್ರಪ್ರೇಮಿಗಳು, ಆತ್ಮ ಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು. ಅವರಿಗೆ ದೇಶವೇ ಮನೆ, ದೇಶವಾಸಿಗಳೇ ಬಂಧುಗಳು.ಅವರ ನಿಸ್ವಾರ್ಥ ಸಮಾಜಸೇವೆಯೇ ದೇವರ ಪೂಜೆ. ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥಗುಣ ಅರಿಯಿರಿ‘ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT