ಭಾನುವಾರ, ಜೂನ್ 26, 2022
25 °C

ಕಾಂಗ್ರೆಸ್‌ ತೊರೆದ ಚಿತ್ರನಟ 'ಮುಖ್ಯಮಂತ್ರಿʼ ಚಂದ್ರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿತ್ರನಟ "ಮುಖ್ಯಮಂತ್ರಿʼ ಚಂದ್ರು ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಶನಿವಾರ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ವೈಯಕ್ತಿಕ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು "ಪ್ರಜಾವಾಣಿʼ ಜತೆ ಮಾತನಾಡಿದ ಅವರು, “ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್‌ಗೆ ನಾಮಕಾರಣ ಮಾಡಲು ಹೆಸರನ್ನು ಅಂತಿಮಗೊಳಿಸಿ, ಕೊನೆಯ ಕ್ಷಣದಲ್ಲಿ ಪ್ರಭಾವಿ ನಾಯಕರೊಬ್ಬರ ಹಸ್ತಕ್ಷೇಪದಿಂದ ಬದಲಾವಣೆ ಮಾಡಿದ್ದರು. ಈ ಎಲ್ಲವೂ ನನಗೆ ನೋವುಂಟು ಮಾಡಿದೆʼ ಎಂದರು.

ಅತಿ ಹಿಂದುಳಿದ ಸಮುದಾಯಗಳ ಪರವಾಗಿ ತಮ್ಮ ಹೋರಾಟ ಮುಂದುವರಿಯುತ್ತದೆ. ಯಾವ ಪಕ್ಷ ಸೇರಬೇಕು ಎಂಬುದರ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ರಾಜ್ಯಸಭೆ ಸ್ಥಾನಕ್ಕೆ ಬೇಡಿಕೆ ಇಟ್ಟು ರಾಜೀನಾಮೆ ನೀಡಲಾಗಿದೆ ಎಂಬುದು ಸುಳ್ಳು ಮಾಹಿತಿ. ಅಂತಹ ಯಾವ ಬೇಡಿಕೆಯನ್ನೂ ಇಟ್ಟಿಲ್ಲ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು