ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಮಾಜಿಕ ಮಾಧ್ಯಮದಲ್ಲಿ ನಿಂದನೆ: ನಟಿ ರಮ್ಯಾರಿಂದ ಸೈಬರ್ ಪೊಲೀಸರಿಗೆ ದೂರು

Last Updated 9 ಜೂನ್ 2022, 14:57 IST
ಅಕ್ಷರ ಗಾತ್ರ

ಬೆಂಗಳೂರು: ನಟಿ ರಮ್ಯಾ ಅವರನ್ನು ನಿಂದಿಸಿ ವ್ಯಕ್ತಿಯೊಬ್ಬರು ಪೋಸ್ಟ್ ಪ್ರಕಟಿಸಿದ್ದು, ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ನಟಿ ರಮ್ಯಾ ಅವರು ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಟ್ವಿಟರ್, ಇನ್‌ಸ್ಟಾಗ್ರಾಮ್ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ರಮ್ಯಾ ಖಾತೆ ಹೊಂದಿದ್ದಾರೆ. ಇತ್ತೀಚೆಗೆ ವ್ಯಕ್ತಿಯೊಬ್ಬ ರಮ್ಯಾ ಅವರನ್ನು ನಿಂದಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಪ್ರಕಟಿಸಿದ್ದನೆಂದು ಹೇಳಲಾಗುತ್ತಿದೆ. ಪುರಾವೆಗಾಗಿ ಪೋಸ್ಟ್‌ನ ಸ್ಕ್ರೀನ್‌ಶಾಟ್‌ ಇದ್ದು, ಅದನ್ನು ಪರಿಶೀಲಿಸಲಾಗುತ್ತಿದೆ’ ಎಂದೂ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT