ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು

Last Updated 24 ಜನವರಿ 2023, 22:27 IST
ಅಕ್ಷರ ಗಾತ್ರ

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಆರಂಭಿಸಲಾಗಿದ್ದ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಈಗಾಗಲೇ ನೀಡಲಾಗಿದ್ದ ಸ್ಥಳ ನಿಯುಕ್ತಿ ಆದೇಶಗಳನ್ನು ಹಿಂಪಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ಕಡಿಮೆ ಇರುವ ರಾಜ್ಯದ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಲ್ಲಿನ 10,500 ಶಿಕ್ಷಕರನ್ನು ‘ಹೆಚ್ಚುವರಿ’ ಎಂದು ಶಿಕ್ಷಣ ಇಲಾಖೆ ಪಟ್ಟಿ ಮಾಡಿತ್ತು. ಸರ್ಕಾರ ಒಂದರಿಂದ ಐದನೇ ತರಗತಿಯವರೆಗೆ 40 ವಿದ್ಯಾರ್ಥಿ
ಗಳಿಗೆ, ಆರರಿಂದ ಎಂಟನೇ ತರಗತಿಯವರೆಗೆ 35 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಂತೆ ಅನುಪಾತ ನಿಗದಿ ಮಾಡಿದೆ. ಈ ಅನುಪಾತಕ್ಕೆ ಅನುಗುಣವಾಗಿ ರಾಜ್ಯದ ವಿವಿಧ ಶಾಲೆಗಳಲ್ಲಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರತಿ ವರ್ಷ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದ್ದು, ಎರಡು ವರ್ಷಗಳಿಗೊಮ್ಮೆ ಹೆಚ್ಚುವರಿ ಶಿಕ್ಷಕರ ಪಟ್ಟಿ ಸಿದ್ಧಪಡಿಸಿ, ಅವರನ್ನು ಅಗತ್ಯವಿರುವ ಇತರೆ ಶಾಲೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಈ ಬಾರಿ ಪ್ರಾಥಮಿಕ ಶಾಲೆಗಳಲ್ಲಿ 8,500 ಹಾಗೂ ಪ್ರೌಢ ಶಾಲೆಗಳಲ್ಲಿ ಎರಡು ಸಾವಿರ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ, ಜನವರಿ 24 ರಿಂದ ಸ್ಥಳ ಮರುನಿಯುಕ್ತಿಗಾಗಿ ಕೌನ್ಸೆಲಿಂಗ್ ಆರಂಭಿಸಲಾಗಿತ್ತು.

‘ಹೆಚ್ಚುವರಿ ಶಿಕ್ಷಕರ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷಗಳಿವೆ. ನ್ಯೂನತೆಗಳಿದ್ದರೂ ಕೌನ್ಸೆಲಿಂಗ್‌ ನಡೆಸುತ್ತಿರುವುದು ಸರಿಯಲ್ಲ. ತಕ್ಷಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಮುಂದಿನ ಕೌನ್ಸೆಲಿಂಗ್‌ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಬೇಕು’ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮಂಗಳವಾರ ಇಲಾಖೆಯ ಆಯುಕ್ತರಿಗೆ ಲಿಖಿತ ಸೂಚನೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT