ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಅಕ್ರಮ: ಅಮೃತ್ ಪಾಲ್ ವರ್ಗ

Last Updated 27 ಏಪ್ರಿಲ್ 2022, 19:28 IST
ಅಕ್ಷರ ಗಾತ್ರ

ಬೆಂಗಳೂರು: 545 ಪಿಎಸ್ಐ ಹುದ್ದೆ ಗಳಿಗೆ ನೇಮಕಾತಿಯ ಅಕ್ರಮಗಳು ಹೊರಬರುತ್ತಿರುವ ಮಧ್ಯೆಯೇ ಪೊಲೀಸ್ ನೇಮಕಾತಿ‌ ಮಂಡಳಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ರಾಜ್ಯ ಸರ್ಕಾರ ಬುಧವಾರ ವರ್ಗಾವಣೆ ಮಾಡಿದೆ.

ಅಪರಾಧ ಮತ್ತು ತಾಂತ್ರಿಕ ಸೇವೆ ಘಟಕದ ಎಡಿಜಿಪಿ ಆರ್.ಹಿತೇಂದ್ರ ಅವ ರಿಗೆ ಪೊಲೀಸ್ ನೇಮಕಾತಿ ಮಂಡಳಿ ಎಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಅಮೃತ್ ಪಾಲ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನೇಮಿಸಲಾಗಿದೆ.

ಅಕ್ರಮಗಳು ಖಚಿತವಾದಂತೇ ಪಾಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲೇ ಒತ್ತಡ ಹೆಚ್ಚಾಗಿತ್ತು.

‘ಅಕ್ರಮ ಕುರಿತು ಕೆಲ ಅಭ್ಯರ್ಥಿಗಳು ನೇರವಾಗಿ ದೂರು ನೀಡಿದ್ದರೂ ಪಾಲ್ ನಿರ್ಲಕ್ಷ್ಯ ವಹಿಸಿದ್ದರು.‌ ಪ್ರಕರಣದಲ್ಲಿ ಇಲಾಖೆಯ ಕೆಲ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆಗಳಿವೆ. ಅಮೃತ್‌ ಪಾಲ್‌ ಅಲ್ಲದೆ, ಪರೀಕ್ಷೆ ಪ್ರಕ್ರಿಯೆಯಲ್ಲಿ ಭಾಗಿಯಾದ ಕೆಲ ಅಧಿಕಾರಿಗಳ ವರ್ಗಾ ವಣೆ ಕುರಿತು ಚರ್ಚೆ ನಡೆದಿದೆ’ ಎಂದು ಗೃಹ ಇಲಾಖೆ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT