ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮ್ಮನೆ ಬಿಟ್ಟರೆ ಮುಂದೆ ರಾಷ್ಟ್ರಗೀತೆಗೂ ಅವಮಾನಿಸಬಹುದು: ಆದಿಚುಂಚನಗಿರಿ ಶ್ರೀ

Last Updated 31 ಮೇ 2022, 5:29 IST
ಅಕ್ಷರ ಗಾತ್ರ

ಬೆಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್‌ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪುನಃ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

‌‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ನಿರ್ಮಲಾ ನಂದನಾಥ ಸ್ವಾಮೀಜಿ ತಿಳಿಸಿದರು ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT