ಮಂಗಳವಾರ, ಮಾರ್ಚ್ 28, 2023
31 °C

ಮುರುಘಾ ಮಠದ ಆಡಳಿತಾತ್ಮಕ ಕಾರ್ಯವೈಖರಿ; ಸರ್ಕಾರ ಶೀರ್ಘ ನಿರ್ಧಾರ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಮುರುಘಾ ಮಠದ ಆಡಳಿತಾತ್ಮಕ ಕಾರ್ಯವೈಖರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನೀಡಿದ ವರದಿ ಕಾನೂನು ಇಲಾಖೆಯಲ್ಲಿದ್ದು, ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 'ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ನಡೆದಿದೆ ಎನ್ನಲಾದ ಪ್ರಕರಣವನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ಹಂತದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ' ಎಂದರು

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಮಂಡಿ ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ ಕಾರ್ಯಕ್ರಮಗಳಿಗೆ ಅವರು ಹಾಜರಾಗುತ್ತಿಲ್ಲ. ಬಿಜೆಪಿಯಲ್ಲಿ ಯಾವೂದೇ ಭಿನ್ನಮತವಿಲ್ಲ' ಎಂದು ಹೇಳಿದರು. 

ಜೆಡಿಎಸ್ ಗೆ ಬಹುಮತ ಸಿಕ್ಕರೆ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿ ಹಾಗೂ ದಲಿತರನ್ನು ಉಪ ಮುಖ್ಯಮಂತ್ರಿ  ಮಾಡುವುದಾಗಿ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 'ಅದು ಜೆಡಿಎಸ್  ನಿರ್ಣಯ. ಈ ಬಗ್ಗೆ ಮಾತನಾಡುವುದಿಲ್ಲ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು