ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ, ತಾ.ಪಂಗಳಿಗೆ ಆಡಳಿತಾಧಿಕಾರಿ ನೇಮಕ

Last Updated 26 ಏಪ್ರಿಲ್ 2021, 21:28 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಕಾರಣಕ್ಕೆ ಚುನಾವಣೆ ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರ, ಇದೇ ಮೇ– ಜೂನ್‌ ತಿಂಗಳಲ್ಲಿ ಅವಧಿ ಮುಕ್ತಾಯಗೊಳ್ಳಲಿರುವ 30 ಜಿಲ್ಲಾ ಪಂಚಾಯಿತಿಗಳು ಮತ್ತು ಹೊಸದಾಗಿ ರಚನೆಯಾದವು ಸೇರಿದಂತೆ 229 ತಾಲ್ಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಿದೆ.

ಜಿಲ್ಲಾ ಪಂಚಾಯಿತಿಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ತಾಲ್ಲೂಕು ಪಂಚಾಯಿತಿಗಳಿಗೆ ಆಯಾ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಅಥವಾ ಆ ಶ್ರೇಣಿಗೆ ಸರಿಸಮನಾದ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಿಸುವ ಅಧಿಕಾರವನ್ನು ಆಯಾ ಪ್ರಾದೇಶಿಕ ವಿಭಾಗದ ಆಯುಕ್ತರಿಗೆ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಅಧ್ಯಕ್ಷ– ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡ ದಿನದಿಂದ, ಹೊಸದಾಗಿ ಆಯ್ಕೆ ಪ್ರಕ್ರಿಯೆ ಮುಗಿಯುವವರೆಗೆ ಆಡಳಿತಾಧಿಕಾರಿಯ ಅವಧಿ ಇರಲಿದೆ ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT