ಮಂಗಳವಾರ, ಮೇ 18, 2021
28 °C

ಸಿಡಿ ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ಕಮಿಷನರ್‌ಗೆ ದೂರು ನೀಡಿದ ವಕೀಲ‌ ಜಗದೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶುಕ್ರವಾರ ಮಧ್ಯಾಹ್ನವೇ ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಲಾಗುವುದು ಎಂದು ಯುವತಿ ವಕೀಲರಾದ ಕೆ.ಎನ್. ಜಗದೀಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ‌ ಮಾತನಾಡಿರುವ ಜಗದೀಶ್ ಕುಮಾರ್, ‘ಯುವತಿ ತಮ್ಮ ಕೈಯಿಂದ ಬರೆದಿರುವ ದೂರಿನ ಪ್ರತಿಯನ್ನು ನಮಗೆ ತಲುಪಿಸಿದ್ದಾರೆ. ಇದನ್ನೇ ಕಮಿಷನರ್ ಅವರಿಗೆ ನೀಡಿ, ಮುಂದಿನ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುವುದು’ ಎಂದಿದ್ದಾರೆ.

‘ಯುವತಿಗೆ ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆ ಇದೆ. ಅವರಿಗೆ ಸೂಕ್ತ ಭದ್ರತೆ ನೀಡಬೇಕು. ನಂತರವೇ ಯುವತಿ, ಕಮಿಷನರ್ ಎದುರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ’ ಎಂದೂ ಹೇಳಿದ್ದಾರೆ.

ಇದನ್ನೂ ಓದಿ... ಸಿ.ಡಿ. ಪ್ರಕರಣ ಸಂಬಂಧ ರಮೇಶ ಜಾರಕಿಹೊಳಿ ವಿರುದ್ಧ ವಕೀಲರ ಮೂಲಕ ದೂರು: ಯುವತಿ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು