ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2-3 ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ: ಯಡಿಯೂರಪ್ಪ ವಿಶ್ವಾಸ

Last Updated 25 ಆಗಸ್ಟ್ 2020, 9:44 IST
ಅಕ್ಷರ ಗಾತ್ರ
ADVERTISEMENT
""

ಬೆಳಗಾವಿ: ಕೋವಿಡ್ ಕಾರಣದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಆದರೂ ಸರ್ಕಾರಿ ನೌಕರರಿಗೆ ವೇತನ ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳು ನಿಂತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಎರಡು ಮೂರು ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕಳೆದ ವರ್ಷ ಉಂಟಾಗಿದ್ದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆಗಳ ನಿರ್ಮಾಣ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ. ಅಲ್ಲದೆ ಸಂತ್ರಸ್ತರಿಗೆ ಖಾತೆಗೆ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ಈ ವರ್ಷದ ಹಾನಿ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ವರದಿ ಸಿದ್ಧವಾದ ಬಳಿಕ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಎನ್ ಡಿ ಆರ್ ಎಫ್ ಮಾರ್ಗಸೂಚಿ ಪ್ರಕಾರ ಬೆಳೆ ಹಾನಿ ಪರಿಹಾರ ಕೊಡಲಾಗುವುದು’ ಎಂದರು.

ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಹತ್ತು ರೂಪಾಯಿ ಕೂಡ ದುರಪಯೋಗ ಆಗಬಾರದು. ಅರ್ಹ ರೈತರಿಗೆ ತ್ವರಿತವಾಗಿ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಅತಿವೃಷ್ಟಿಯಿಂದಾಗಿ ರಸ್ತೆ, ಸೇತುವೆ, ಮನೆಗಳಿಗೆ ಹಾನಿಯಾಗಿದೆ. ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಹಾನಿಯ ಸಂಪೂರ್ಣ ವರದಿ ಸಿದ್ಧಪಡಿಸಲಾಗುವುದು ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಆರೋಗ್ಯ ಭಾಗ್ಯ ಯೋಜನೆಯಲ್ಲಿ ಪೊಲೀಸರನ್ನು ಸೇರಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದಿದ್ದರೆ ಕ್ರಮಕ್ಕೆ ಸೂಚನೆ ನೀಡಲಾಗುವುದು. ಕೊರೊನಾ ಯೋಧರಾದ ಪೊಲೀಸರಿಗೆ ಆರೋಗ್ಯ ರಕ್ಷಣೆ ನೀಡಲು ಸರ್ಕಾರ ಬದ್ಧವಾಗಿದೆ ಎಂದರು.

ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಪರಿಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ₹ 400 ಕೋಟೆಯನ್ನು ಮುಂಗಡವಾಗಿ ಬಿಡುಗಡೆ ಮಾಡಿದೆ ಎಂದರು.

ಕಂದಾಯ ಸಚಿವ ಆರ್.ಅಶೋಕ್, ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಜೊತೆಗಿದ್ದರು.

ಪ್ರತಿಮೆ ಪ್ರತಿಷ್ಠಾಪನೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ
ಬೆಳಗಾವಿ:
ತಾಲ್ಲೂಕಿನ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಕೋರಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಮುಖಂಡರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಮನವಿ ಸಲ್ಲಿಸಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಮುಖಂಡರಾದ ಮಹಾದೇವ ತಳವಾರ, ರಾಜೇಂದ್ರ ಸಣ್ಣಕ್ಕಿ ಇದ್ದರು.

ಆ. 15ರಂದು ರಾಯಣ್ಣನ ಜಯಂತಿ ಅಂಗವಾಗಿ ಅಭಿಮಾನಿಗಳು ಪೀರನವಾಡಿಯಲ್ಲಿ ಪ್ರತಿಮೆ ಪ್ರತಿಷ್ಠಾಪನೆಗೆ ಮುಂದಾಗಿದ್ದರು. ಪೊಲೀಸರು ಅವರನ್ನು ತಡೆದು ಪ್ರತಿಮೆ ವಶಕ್ಕೆ ಪಡೆದಿದ್ದಾರೆ. ಹೀಗಾಗಿ ಇದು ವಿವಾದವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT