ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Updates: ಆಫ್ರಿಕಾದ ವೈರಾಣು ಪತ್ತೆ, ಒಂದೇ ದಿನ 760 ಪ್ರಕರಣ

Last Updated 10 ಮಾರ್ಚ್ 2021, 16:28 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಬುಧವಾರ 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ.

ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ ಈವರೆಗೆ 64 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ತಿಂಗಳು 10 ದಿನಗಳ ಅವಧಿಯಲ್ಲಿ 5,550 ಮಂದಿ ಕೊರೊನಾ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 555 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9.56 ಲಕ್ಷ ದಾಟಿದೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಐದು ಮಂದಿ ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದವರ ಒಟ್ಟು ಸಂಖ್ಯೆ 12,379ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 331 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 9.36 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 70 ಸಾವಿರ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೆ 1.94 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ಸದ್ಯ 7,456 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ 488 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.09 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 22 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 54,287ಕ್ಕೆ ತಲುಪಿದೆ. ಕಲಬುರ್ಗಿಯಲ್ಲಿ 37, ತುಮಕೂರಿನಲ್ಲಿ 36, ಉಡುಪಿಯಲ್ಲಿ 33, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 25 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT