ಬೆಂಗಳೂರು: ‘ಬೆಂಗಳೂರು– ಮೈಸೂರು ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿವೆ. ಹೀಗಾಗಿ, ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆ ಮಾಡಲಾಗುವುದು’ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಈ ಬಗ್ಗೆ ಚರ್ಚಿಸಿ, ಪರಿಸ್ಥಿತಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದರು.

‘ಬೆಳಗಾವಿಯಲ್ಲಿ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟ ಆರು ಮಂದಿಯ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಅಲ್ಲದೆ, ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಪ್ರಕರಣದ ತನಿಖೆ ಮಾಡಲು ಸೂಚಿಸಲಾಗಿದೆ’ ಎಂದರು.

ಬೆಂಗಳೂರು: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ, ಒಂದೇ ವರ್ಷ 153 ಅತ್ಯಾಚಾರ ಪ್ರಕರಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.