ಶನಿವಾರ, ಜನವರಿ 16, 2021
25 °C
ಸೋಂಕು ದೃಢಪಟ್ಟ ಶಿಕ್ಷಕರು, ಮಕ್ಕಳ ಸಂಪರ್ಕಕ್ಕೆ ಬಂದಿಲ್ಲ– ಸಚಿವರ ಸ್ಪಷ್ಟನೆ

ಶಾಲಾರಂಭದ ಬೆನ್ನಲ್ಲೆ ಶಿಕ್ಷಕರಿಗೆ ಕೊರೊನಾ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆಯಾದ ಬೆನ್ನಲ್ಲೆ, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಮೈಸೂರು, ಚಾಮರಾಜನಗರ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪಶುಸಂಗೋಪನೆ ಇಲಾಖೆ ನಿರ್ದೇಶನ ನೀಡಿದೆ.

‘ಪ್ರಸಕ್ತ ಶೈಕ್ಷಣಿಕ ವರ್ಷದ ಐದನೇ ದಿನವಾದ ಮಂಗಳವಾರ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗೆ ಶೇ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶಾಲಾರಂಭಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದೂ ಅವರು ಹೇಳಿದ್ದಾರೆ

5,492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 4,24,250 ವಿದ್ಯಾರ್ಥಿಗಳ ಪೈಕಿ 2,42,886 (ಶೇ 57.25) ಹಾಗೂ 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,77,051 (ಶೇ 51.34) ವಿದ್ಯಾರ್ಥಿಗಳು ಮಂಗಳವಾರ ತರಗತಿಗೆ ಹಾಜರಾಗಿದ್ದಾರೆ. 6 ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ವಿದ್ಯಾಗಮ ತರಗತಿಗಳಿಗೆ 6,30,557 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಶಿಕ್ಷಕರಿಗೆ ಕೊರೊನಾ: ಬಾಗಲಕೋಟೆ ಜಿಲ್ಲೆಯ ಐವರು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರು ಶಾಲಾರಂಭಕ್ಕೂ ಮೊದಲೇ ಕೊರೊನಾ ಪರೀಕ್ಷೆಯ ಫಲಿತಾಂಶ ಬಂದಿದ್ದರಿಂದ ಆ ಶಿಕ್ಷಕರು ಕ್ವಾರಂಟೈನ್‍ನಲ್ಲಿದ್ದಾರೆ. ವಿಜಯಪುರ ಜಿಲ್ಲೆಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರಿಗೂ ಸೋಂಕು ದೃಢಪಟ್ಟಿದ್ದು, ಅವರು ಕೂಡಾ ಹೋಮ್‌ ಕ್ವಾರಂಟೈನ್‌ನಲ್ಲಿ ಇದ್ದಾರೆ.

ಹುಕ್ಕೇರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಾಲ್ವರು, ಕೊಪ್ಪಳ ಜಿಲ್ಲೆಯ ವಡಗನಹಳ್ಳಿ ಪ್ರಾಥಮಿಕ ಶಾಲೆಯ ಒಬ್ಬರು, ಬಾಗಲಕೋಟೆ ಜಿಲ್ಲೆಯಲ್ಲಿ ಐವರು, ಚಿತ್ರದುರ್ಗ ಜಿಲ್ಲೆಯ ವಿವಿಧ ಐದು ಶಾಲೆಗಳ ಐವರು ಶಿಕ್ಷಕರಿಗೂ ಕೊರೊನಾ ದೃಢಪಟ್ಟಿದೆ. ಸೋಂಕು ದೃಢಪಟ್ಟ ಎಲ್ಲ ಶಿಕ್ಷಕರು ಹೋಮ್‌ ಕ್ವಾರಂಟೈನ್‌ನಲ್ಲಿ ಇದ್ದಾರೆ.

‘ಬೆಳಗಾವಿ ಜಿಲ್ಲೆ ಕಡೋಲಿ ಶಾಲೆಯ ಶಿಕ್ಷಕರಿಗೆ ಈವರೆಗೆ ಸೋಂಕು ದೃಢಪಟ್ಟಿಲ್ಲ. ಅವರ ತಪಾಸಣೆಯ ಫಲಿತಾಂಶ ಬರಬೇಕಿದೆ. ರ‍್ಯಾಪಿಡ್ ಆ್ಯಂಟಿಜೆನ್‌ ಪರೀಕ್ಷೆಯಲ್ಲಿ ನೆಗೆಟಿವ್‌ ಫಲಿತಾಂಶ ಬಂದಿದೆ. ಪೂರ್ಣ ಫಲಿತಾಂಶ ಬರುವವರೆಗೆ ಶಿಕ್ಷಕರು ಶಾಲೆಗೆ ಹಾಜರಾಗುತ್ತಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಹುಕ್ಕೇರಿ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿದ್ದ ಸ್ಥಳೀಯ ಶಾಸಕ ಗಣೇಶ ಹುಕ್ಕೇರಿ, ಶಾಲಾ ಮಕ್ಕಳಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ಒದಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸುರೇಶ್‌ಕುಮಾರ್ ಹೇಳಿದರು.

ಶಿಕ್ಷಣ ಸಂಸ್ಥೆ ಮೇಲೆ ನಿರ್ಬಂಧ: ತೆರವಿಗೆ ಆಗ್ರಹ

ತುಮಕೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ನವೀಕರಣ ನಿಯಮ ಸಡಿಲಿಸಲು ಪರಾಮರ್ಶೆಗೆ ತಜ್ಞರ ಸಮಿತಿ ನೇಮಕ ಮಾಡುವಂತೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮಂಗಳವಾರ ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದಾರೆ.

‘ಸರ್ಕಾರ ವಿಧಿಸಿರುವ ಷರತ್ತು ಪೂರೈಸುವುದು ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಮಠಗಳು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ಕಷ್ಟ. ತಜ್ಞರ ಸಮಿತಿ ನೇಮಕ ಮಾಡಿ, ಅದು ನೀಡುವ ವರದಿ ಆಧಾರದ ಮೇಲೆ ನಿಯಮ ಸಡಿಲಗೊಳಿಸಿ ಶಿಕ್ಷಣ ಸಂಸ್ಥೆಗಳ ನವೀಕರಣಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ಸರ್ಕಾರದ ನಿಯಮ ಪಾಲನೆ ಕಷ್ಟವಾಗಲಿದೆ. ಎಲ್ಲೋ ಒಂದು ಕಡೆ ನಡೆದ ಬೆಂಕಿ ದುರಂತದ ವಿಚಾರವನ್ನೇ ಮುಂದಿಟ್ಟುಕೊಂಡು ಎಲ್ಲರಿಗೂ ಅನ್ವಯಿಸಬಾರದು. ದೊಡ್ಡ ಕಟ್ಟಡಗಳಲ್ಲಿ ಸುರಕ್ಷತಾ ಕ್ರಮ ಅನುಸರಿಸಲಾಗುತ್ತದೆ. ಸಣ್ಣಪುಟ್ಟ ಶಾಲೆಗಳ ಕಟ್ಟಡ ನಿರ್ಮಿಸುವಾಗ ಈ ನಿಯಮ ಪಾಲನೆ ಕಷ್ಟ. ಶಾಲೆ ನವೀಕರಣ ಮಾಡಲು ವಿವಿಧ ಇಲಾಖೆಗಳಿಂದ ದಾಖಲೆ ಪಡೆದುಕೊಳ್ಳಲು ಸಾಧ್ಯ
ವಾಗದು. ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡುವುದು ಕಷ್ಟ. ಈ ವಿಚಾರದಲ್ಲಿ ಮತ್ತೊಮ್ಮೆ ಪರಾಮರ್ಶೆ ನಡೆಸಬೇಕು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು