ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಯೋಜನೆ ನಿರುದ್ಯೋಗಿಗಳನ್ನು ತಯಾರು ಮಾಡಲಿದೆ: ಕಾಂಗ್ರೆಸ್‌ ವಾಗ್ದಾಳಿ

ಅಕ್ಷರ ಗಾತ್ರ

ಬೆಂಗಳೂರು: ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ 'ಅಗ್ನಿಪಥ' ವಿರುದ್ಧ ಕಾಂಗ್ರೆಸ್‌ ಪಕ್ಷವು ವಾಗ್ದಾಳಿ ಮುಂದುವರಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕೆಪಿಸಿಸಿ, ‘ಅಗ್ನಿಪಥ್ ಯೋಜನೆ ನಿರುದ್ಯೋಗಿಗಳನ್ನು ತಯಾರು ಮಾಡುವುದೇ ಹೊರತು ಯೋಧರನ್ನಲ್ಲ’ ಎಂದು ಟೀಕಿಸಿದೆ.

‘ನಿಯಮದ ಅನುಸಾರ 'ನಿವೃತ್ತ ಯೋಧ' ಎಂದು ಪರಿಗಣಿಸಲು ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು, 4 ವರ್ಷ ಸೇವೆ ಮಾಡುವ ಅಗ್ನಿವೀರರಿಗೆ ಆ ಗೌರವವೂ ದೊರಕುವುದಿಲ್ಲ’ ಎಂದು ಕೆಪಿಸಿಸಿ ಹರಿಹಾಯ್ದಿದೆ.

‘ವೃತ್ತಿ ಕೌಶಲ್ಯ ನೀಡುತ್ತೇವೆ ಎಂದಿರುವ ಸರ್ಕಾರ ತನ್ನ ಕೌಶಲ್ಯ ಅಭಿವೃದ್ಧಿ ಇಲಾಖೆಯನ್ನು ಮುಚ್ಚಿದೆಯೇ?’ ಎಂದು ಪ್ರಶ್ನಿಸಿದೆ.

ಸೇನಾ ಪಡೆಗಳಿಗೆ ಯುವ ಜನರನ್ನು ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ ಯೋಜನೆ’ಯನ್ನು ಕೇಂದ್ರ ಸರ್ಕಾರವು ಕಳೆದ ವಾರ ಪ್ರಕಟಿಸಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT