ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಬಿ.ಸಿ.ಪಾಟೀಲ್‌

Last Updated 3 ಡಿಸೆಂಬರ್ 2020, 10:08 IST
ಅಕ್ಷರ ಗಾತ್ರ

ಮಡಿಕೇರಿ: ‘ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ಪೊನ್ನಂಪೇಟೆಯ ಸಮೀಪದ ಕೃಷಿ ಕಾಲೇಜಿನಲ್ಲಿ ಗುರುವಾರ ‘ಬಿದಿರು ಸಂಸ್ಕರಣೆ ಹಾಗೂ ಬಿದುರು ಮೌಲ್ಯವರ್ಧನಾ ಘಟಕ’ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

‘ಕೃಷಿ ಮಾಡಿಯೂ ಉತ್ತಮ ಬದುಕು ಕಟ್ಟಿಕೊಂಡವರು ಇದ್ದಾರೆ. ಆದರೆ, ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹೆಂಡತಿ ಹಾಗೂ ಮಕ್ಕಳನ್ನು ನೋಡಿಕೊಳ್ಳದ ರೈತ ಹೇಡಿ’ ಎಂದು ಪುನರುಚ್ಚರಿಸಿದರು.

‘ಬದುಕಿ ತೋರಿಸುವ ಗುಣ ಬೆಳೆಸಿಕೊಳ್ಳಬೇಕು. ಈಜಿ ಜಯಿಸಬೇಕು’ ಎಂದು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಭತ್ತ ಮತ್ತು ಕಬ್ಬನ್ನು ಪ್ರಮುಖವಾಗಿ ರೈತರು ಬೆಳೆಯುತ್ತಾರೆ. ಆದರೆ, ಕೋಲಾರ ಜಿಲ್ಲೆಯಲ್ಲಿ ಮಿಶ್ರ ಬೆಳೆ ಬೆಳೆಯುತ್ತಾರೆ. ಆದ್ದರಿಂದ, ಕೃಷಿ ಜತೆಗೆ ಹೈನುಗಾರಿಕೆ, ಮೀನುಗಾರಿಕೆ, ತರಕಾರಿ.. ಹೀಗೆ ಮಿಶ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು ಅಗತ್ಯ’ ಎಂದು ಬಿ.ಸಿ.ಪಾಟೀಲ್ ಅವರು ಸಲಹೆ ಮಾಡಿದರು.

ಅರಣ್ಯ ಇದ್ದರೆ ಮಳೆ, ಮಳೆ ಬಂದಲ್ಲಿ ಸಮೃದ್ಧ ಬೆಳೆ, ಬೆಳೆ ಬೆಳೆದಲ್ಲಿ ಉತ್ತಮ ಬದುಕು ಎಂದು ವರ್ಣಿಸಿದರು.

ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣುವ ನಿಟ್ಟಿನಲ್ಲಿ ಇಸ್ರೇಲ್ ಮಾದರಿ ಬೇಕಿಲ್ಲ, ಕೋಲಾರ ಜಿಲ್ಲೆಯ ಮಾದರಿ ಅಳವಡಿಸಿಕೊಂಡರೆ ರೈತರ ಆತ್ಮಹತ್ಯೆ ತಡೆಯಬಹುದು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಅರಣ್ಯ ಸಚಿವ ಆನಂದ್ ಸಿಂಗ್ ಮಾತನಾಡಿ, ಅರಣ್ಯ ಸಂರಕ್ಷಣೆ ಜತೆಗೆ ಅರಣ್ಯದಲ್ಲಿ ವಾಸಿಸುವ ಹಾಡಿಯ ಜನರ ಬದುಕು ಅರ್ಥ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT