ಗುರುವಾರ , ಸೆಪ್ಟೆಂಬರ್ 16, 2021
25 °C

ರಾಜ್ಯದೆಲ್ಲೆಡೆ ‘ಹಡಿಲುಭೂಮಿ ಕೃಷಿ ಅಭಿಯಾನ’ ನಡೆಯಲಿ: ಕೃಷಿ ಸಚಿವ ಬಿ.ಸಿ. ಪಾಟೀಲ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ರಾಜ್ಯದಲ್ಲಿ ಬೀಳುಬಿದ್ದಿರುವ 15 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ‘ಹಡಿಲುಭೂಮಿ ಕೃಷಿ ಅಭಿಯಾನ’ ನಡೆದರೆ ಭೂಮಿ ಹಸನಾಗಲಿದೆ. ಉಡುಪಿಯ ಅಭಿಯಾನ ರಾಜ್ಯಕ್ಕೆ ವಿಸ್ತರಿಸಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಶನಿವಾರ ಕೇದಾರೋತ್ಥಾನ ಟ್ರಸ್ಟ್‌ನಿಂದ ಕಡೆಕಾರಿನಲ್ಲಿ ನಡೆದ ಹಡಿಲು ಭೂಮಿ ಕೃಷಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ‘ರಾಜ್ಯಕ್ಕೆ ಮಾದರಿ ಹಾಗೂ ಮಾರ್ಗದರ್ಶನ ಮಾಡುವ ಕೆಲಸವನ್ನು ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್‌ ಮಾಡುತ್ತಿದೆ. ಜಿಲ್ಲೆಯಲ್ಲಿ ಹಡಿಲು ಬಿದ್ದಿದ್ದ 2,000 ಎಕರೆಯಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತದ ನಾಟಿ ನಡೆಯುತ್ತಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಟ್ರಸ್ಟ್ ಮಾಡುತ್ತಿರುವುದು ಅಭಿನಂದನೀಯ’ ಎಂದರು.

ಕೃಷಿಯಲ್ಲಿ ಹೆಚ್ಚು ರಾಸಾಯನಿಕ ಬಳಕೆಯಿಂದ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮ ತಡೆಗೆ ಸರ್ಕಾರ ಸಾವಯವ ಕೃಷಿಗೆ ಪ್ರೋತ್ಸಾಹ ನೀಡಲು ₹ 500 ಕೋಟಿ ಮೀಸಲಿಟ್ಟಿದೆ. ರೈತರು ಸಾವಯವ ಕೃಷಿಯತ್ತ ಹೆಚ್ಚು ಆಸಕ್ತಿ ತೋರಬೇಕು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು