ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ರಸಗೊಬ್ಬರ ಖಾತೆ ಸಚಿವ ಸದಾನಂದಗೌಡ ಭೇಟಿಯಾದ ಕೃಷಿ ಸಚಿವ ಬಿ.ಸಿ.ಪಾಟೀಲ

Last Updated 27 ಆಗಸ್ಟ್ 2020, 7:08 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿಗೆ ಭೇಟಿ ನೀಡಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ಅವರುಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡರನ್ನು ಭೇಟಿಯಾದರು.

ಈ ಬಾರಿ ಉತ್ತಮ ಮಳೆಯಾಗಿದ್ದು, ಅಲ್ಲದೇ ಕೋವಿಡ್‌ನಿಂದಾಗಿ ಗ್ರಾಮೀಣ ಭಾಗದಲ್ಲಿ ಕೃಷಿಯೆಡೆಗೆ ರೈತಾಪಿವರ್ಗದ ಜೊತೆಗೆ ಯುವಜನತೆ ಕೃಷಿಗೆ ಹೆಚ್ಚು ಒತ್ತು ನೀಡಿರುವುದರಿಂದ ಈ ಬಾರಿ ಬಿತ್ತನೆಯೂ ಹೆಚ್ಚಾಗಿದೆ. ಆದ್ದರಿಂದ ಕೃಷಿಗೆ ಅಗತ್ಯವಾದ ರಸಗೊಬ್ಬರ ಹೆಚ್ಚಿನದಾಗಿ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗಲೀ ಯೂರಿಯಾದ ಕೊರತೆಯಾಗಲೀ ಆಗದಂತೆ ಕೃಷಿ ಸಚಿವರು ದಿಟ್ಟ ಹೆಜ್ಜೆಯಿಟ್ಟಿರುವ ಬಗ್ಗೆ ಕೇಂದ್ರದದ ಸಚಿವರೊಂದಿಗೆ ಚರ್ಚಿಸಿದರು. ಹಾಗೂ ನಕಲಿ ಬೀಜ ತಡೆ, ನಕಲಿ ರಾಸಾಯನಿಕ ಗೊಬ್ಬರ ಜಾಲವನ್ನು ಬೇಧಿಸುವಲ್ಲಿ ಕೃಷಿ‌ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು.

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಕಲಿ ಬೀಜ ರಾಸಾಯನಿಕ ಗೊಬ್ಬರ ಹಾಗೂ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಅವರ ಪರವಾನಿಗೆ ರದ್ದುಗೊಳಿಸುವ ಬಗ್ಗೆಯೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೇಂದ್ರ ಸಚಿವರ ಜೊತೆ ಮಾಹಿತಿ ಹಂಚಿಕೊಂಡರು. ಕೃಷಿ ಸಚಿವರ ಈ ದಿಟ್ಟ ಕ್ರಮ ಹಾಗೂ ರೈತರ ಬಗೆಗಿನ ಕಾಳಜಿಗೆ ಸದಾನಂದಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಅವಶ್ಯಕತೆಗಿಂತಲೂ ಹೆಚ್ಚಿನ ರಸಗೊಬ್ಬರವನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲೂ ಸಹ ರಸಗೊಬ್ಬರದ ಕೊರತೆಯಾಗುವುದಿಲ್ಲವೆಂದು‌ ಡಿ.ವಿ.ಸದಾನಂದಗೌಡಭರವಸೆ ನೀಡಿದರು. ಇದರೊಂದಿಗೆ ಕರ್ನಾಟಕಕ್ಕೆ ಅವಶ್ಯಕ ಗೊಬ್ಬರವನ್ನು ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT