ಶನಿವಾರ, ಮಾರ್ಚ್ 25, 2023
28 °C

ಕೋವಿಡ್‌ನಿಂದ ಮೃತಪಟ್ಟಿರುವ ರೈತರ ಸಾಲಮನ್ನಾಗೆ ಚಿಂತನೆ: ಎಸ್‌.ಟಿ.ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ಗಳಲ್ಲಿ ಬೆಳೆಸಾಲ ಪಡೆದಿದ್ದು, ಕೋವಿಡ್‌ನಿಂದ ಮೃತಪಟ್ಟಿರುವ ರೈತರ ಸಾಲಮನ್ನಾಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಂತಿಸಿದ್ದಾರೆ. ಇಂತಹ ರೈತರ ಮಾಹಿತಿ ನೀಡಲು ಅಪೆಕ್ಸ್‌ ಬ್ಯಾಂಕ್‌ಗೆ ಸೂಚಿಸಲಾಗಿದೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಮಂಗಳವಾರ ತಿಳಿಸಿದರು.

ನಗರದಲ್ಲಿ ನಡೆದ ‘ರೈತ ಸ್ಪಂದನೆ’ ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ರೈತರ ಮಾಹಿತಿ ಸಂಗ್ರಹಿಸಿದ ಬಳಿಕ ಮುಖ್ಯಮಂತ್ರಿ ಜೊತೆ ಚರ್ಚಿಸಿ, ಈ ಬಗ್ಗೆ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

‘ವಿಜಯಪುರ ಡಿಸಿಸಿ ಬ್ಯಾಂಕ್‌ನ ಶತಮಾನೋತ್ಸವಕ್ಕಾಗಿ ಮೀಸಲಿಟ್ಟಿದ್ದ ನಿಧಿಯನ್ನೇ ಬಳಸಿ ಕೋವಿಡ್‌ನಿಂದ ಮೃತಪಟ್ಟ ಸಾಲಗಾರ ರೈತರ ಕುಟುಂಬಗಳಿಗೆ ವಿತರಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

‘ರಾಜ್ಯದ 21 ಡಿಸಿಸಿ ಬ್ಯಾಂಕ್‌ಗಳು ಲಾಭದಲ್ಲಿವೆ. ಶಿವಮೊಗ್ಗ, ಕಲಬುರ್ಗಿ ಡಿಸಿಸಿ ಬ್ಯಾಂಕ್‌ಗಳ ಸಮಸ್ಯೆ ಬಗೆಹರಿದಿದೆ. ಶಿವಮೊಗ್ಗದಲ್ಲಿ ಅಧಿಕಾರಿ ವರ್ಗವನ್ನೇ ಬದಲಿಸಲಾಗಿದೆ. ಕಲಬುರ್ಗಿಯಲ್ಲಿ ಸ್ಥಗಿತವಾಗಿದ್ದ ₹ 195 ಕೋಟಿ ಸಾಲವನ್ನು ಮರುಪಾವತಿಸಿದ್ದು, ಜುಲೈ 10ರಂದು ಹೊಸದಾಗಿ ₹ 50 ಕೋಟಿ ಸಾಲ ಕೊಡಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು