ಸೋಮವಾರ, ಜೂನ್ 27, 2022
26 °C

ವಿಕ್ಟೋರಿಯಾದಿಂದ ಇಂದು 'ಚಿನ್ನಮ್ಮ' ಬಿಡುಗಡೆ; ಆಸ್ಪತ್ರೆಯ ಮುಂದೆ ಅಭಿಮಾನಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಕ್ಟೋರಿಯಾ ಆಸ್ಪತ್ರೆಯ ಮುಂದೆ ಶಶಿಕಲಾ ಅವರ ಅಭಿಮಾನಿಗಳು

ಬೆಂಗಳೂರು: ಅಭಿಮಾನಿಗಳ ಪಾಲಿಗೆ 'ಚಿನ್ನಮ್ಮ' ಆಗಿರುವ ಎಐಎಡಿಎಂಕೆ (ಉಚ್ಚಾಟಿತ) ನಾಯಕಿ ವಿ.ಕೆ. ಶಶಿಕಲಾ ನಟರಾಜನ್‌,  ನಗರದ ವಿಕ್ಟೋರಿಯಾ ಆಸ್ಪತ್ರೆಯಿಂದ ಭಾನುವಾರ ಬಿಡುಗಡೆ ಆಗಲಿದ್ದಾರೆ. ಈಗಾಗಲೇ  ಆಸ್ಪತ್ರೆ ಮುಂದೆ ಜನರು ಸೇರುತ್ತಿತ್ತು, ಸುತ್ತ ಪೊಲೀಸ್‌ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಶಶಿಕಲಾ ಅವರನ್ನು ಬರಮಾಡಿಕೊಳ್ಳಲು ತಮಿಳುನಾಡಿನಿಂದ ನೂರಾರು ಮಂದಿ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

‘ಜೈಲಿನಿಂದ ಬಿಡುಗಡೆ ಆಗಿರುವ ಶಶಿಕಲಾ, ಇದೀಗ ಕೋವಿಡ್‌ಗೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆಸ್ಪತ್ರೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಇಂದು ಶಶಿಕಲಾ ಬಿಡುಗಡೆ ಆಗುವ ಸಾಧ್ಯತೆ ಇದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಜೈಲು ಶಿಕ್ಷೆ ಘೋಷಣೆಯಾದ ದಿನದಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಶಿಕಲಾ ಕರೆತರುವ ವೇಳೆ ಗಲಾಟೆ ಉಂಟಾಗಿತ್ತು. ಕೆಲ ವಾಹನಗಳಿಗೂ ಹಾನಿ ಆಗಿತ್ತು. ಅದೇ ಕಾರಣಕ್ಕೆ ಇದೀಗ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು