ಶುಕ್ರವಾರ, ಏಪ್ರಿಲ್ 16, 2021
25 °C

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಉಪನ್ಯಾಸ ಮಾಲೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ‘ಉಪನ್ಯಾಸ ಮಾಲೆ’ ಆರಂಭಿಸಿದೆ.

‘ಪರೀಕ್ಷೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಕ್ರಮ ಆರಂಭಿಸಿದ್ದೇವೆ. ಎಐಡಿಎಸ್‌ಒ ಕರ್ನಾಟಕದ ಫೇಸ್‌ಬುಕ್‌ ಪುಟ ಹಾಗೂ ಯೂಟ್ಯೂಬ್‌ ವಾಹಿನಿಯಲ್ಲಿ ಉಪನ್ಯಾಸ ಮಾಲಿಕೆ ನೇರ ಪ್ರಸಾರಗೊಳ್ಳಲಿದೆ. ಅನೇಕ ವಿಡಿಯೊಗಳನ್ನೂ ಹಾಕಲಿದ್ದೇವೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪರೀಕ್ಷೆಗಳು ಶುರುವಾದಾಗ ಅನೇಕ ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಅನೇಕರು ಆತ್ಮಹತ್ಯೆಯನ್ನೂ ಮಾಡಿಕೊಳ್ಳುತ್ತಾರೆ. ಅಂತಹವರಿಗೆ ಧೈರ್ಯ ತುಂಬುವ ಸಲುವಾಗಿ ನಾವು ಈ ಹಿಂದೆ ‘ಆತ್ಮಹತ್ಯೆ ಉತ್ತರವಲ್ಲ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು’ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು